ಎಜ್ಬಾಸ್ಟನ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿಸಲ್ಪಟ್ಟಿರುವ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೊಳಗಾಗಿದೆ.
ಈ ನಡುವೆ ಮಳೆ ಪಂದ್ಯಕ್ಕೆ ಅಡಚಣೆಯಾಗಿದೆ. ಈ ವೇಳೆಗೆ ಭಾರತ ತಂಡವು 20.3 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದೆ.
ಆರಂಭಿಕ ಬ್ಯಾಟರ್ಗಳಾದ ಶುಭಮನ್ ಗಿಲ್ (17) ಹಾಗೂ ಚೇತೇಶ್ವರ ಪೂಜಾರ (13) ವಿಕೆಟ್ ನಷ್ಟವಾಗಿದ್ದು, ಹಿನ್ನಡೆಗೊಳಗಾಗಿದೆ.
ಈ ಎರಡು ವಿಕೆಟ್ಗಳು ಜೇಮ್ಸ್ ಆ್ಯಂಡ್ರೆಸನ್ ಪಾಲಾಯಿತು.
ಈ ಮೊದಲು ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್, ಮೊದಲು ಫೀಲ್ಡಿಂಗ್ ಆಯ್ದುಕೊಂಡರು.
ಕೋವಿಡ್ನಿಂದಾಗಿ ಪ್ರತ್ಯೇಕವಾಸದಲ್ಲಿರುವ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಜಸ್ಪ್ರೀಮ್ ಬೂಮ್ರಾ ಮುನ್ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.