ADVERTISEMENT

IND vs ENG: ಅಂತಿಮ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 6:50 IST
Last Updated 4 ಮಾರ್ಚ್ 2021, 6:50 IST
ಇಂಗ್ಲೆಂಡ್ ನಾಯಕ ಜೋ ರೂಟ್
ಇಂಗ್ಲೆಂಡ್ ನಾಯಕ ಜೋ ರೂಟ್    

ಅಹಮದಾಬಾದ್: ಭಾರತ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಸರಣಿಯನ್ನು ಸಮಬಲಗೊಳಿಸಲು ಇಂಗ್ಲೆಂಡ್ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೊಳಗಾಗಿದೆ. ಅತ್ತ ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಭಾರತ ಕ್ರಿಕೆಟ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಸ್ಥಾನ ಭದ್ರಪಡಿಸುವ ಹಾದಿಯಲ್ಲಿದೆ. ಇಂಗ್ಲೆಂಡ್‌ ಎದುರಿನ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ನಲ್ಲಿ ಡ್ರಾ ಮಾಡಿಕೊಂಡರೂ ಭಾರತದ ಕನಸು ನನಸಾಗಲಿದೆ.

ಬೂಮ್ರಾ ಔಟ್, ಸಿರಾಜ್ ಇನ್...
ಭಾರತ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ವೈಯಕ್ತಿಕ ಕಾರಣಗಳಿಂದಾಗಿ ರಜೆಯಲ್ಲಿ ತೆರಳಿರುವ ಜಸ್‌ಪ್ರೀತ್ ಬೂಮ್ರಾ ಸ್ಥಾನಕ್ಕೆ ಯುವ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ADVERTISEMENT

ಅತ್ತ ಇಂಗ್ಲೆಂಡ್ ತಂಡದಲ್ಲಿ ಜೋಫ್ರಾ ಆರ್ಚರ್ ಹಾಗೂ ಸ್ಟುವರ್ಟ್ ಬ್ರಾಡ್ ಅವರನ್ನು ಕೈಬಿಡಲಾಗಿದ್ದು, ಡ್ಯಾನ್ ಲಾರೆನ್ಸ್ ಹಾಗೂ ಡಾಮ್ ಬೆಸ್ ತಂಡವನ್ನು ಸೇರಿದ್ದಾರೆ.

ಆಡುವ ಬಳಗಇಂತಿದೆ:


ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್: ಡಾಮಿನಿಕ್ ಸಿಬ್ಲಿ, ಜ್ಯಾಕ್ ಕ್ರಾಲಿ, ಜಾನಿ ಬೈರ್‌ಸ್ಟೋ, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಒಲ್ಲಿ ಪಾಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಡ್ಯಾನಿಯಲ್ ಲಾರೆನ್ಸ್, ಡಾಮಿನಿಕ್ ಬೆಸ್, ಜ್ಯಾಕ್ ಲೀಚ್ ಮತ್ತು ಜೇಮ್ಸ್ ಆಂಡ್ರೆಸನ್.

ಈ ವರೆಗಿನ ಫಲಿತಾಂಶಗಳು:

ಚೆನ್ನೈ
ಮೊದಲ ಟೆಸ್ಟ್: ಇಂಗ್ಲೆಂಡ್‌ಗೆ 227 ರನ್ ಅಂತರದ ಗೆಲುವು
ದ್ವಿತೀಯ ಟೆಸ್ಟ್: ಭಾರತಕ್ಕೆ 317 ರನ್ ಅಂತರದ ಗೆಲುವು

ಅಹಮದಾಬಾದ್ (ಪಿಂಕ್ ಬಾಲ್)
ತೃತೀಯ ಟೆಸ್ಟ್: ಭಾರತಕ್ಕೆ 10 ವಿಕೆಟ್ ಜಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.