ADVERTISEMENT

IND vs ENG 1st Test: ಮಳೆ ಅಡ್ಡಿ, 3ನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 25/0

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 17:33 IST
Last Updated 6 ಆಗಸ್ಟ್ 2021, 17:33 IST
ಆಗಸದತ್ತ ನೋಡುತ್ತಿರುವ ವಿರಾಟ್ ಕೊಹ್ಲಿ: ಎಪಿ ಚಿತ್ರ
ಆಗಸದತ್ತ ನೋಡುತ್ತಿರುವ ವಿರಾಟ್ ಕೊಹ್ಲಿ: ಎಪಿ ಚಿತ್ರ   

ನಾಟಿಂಗ್‌ಹ್ಯಾಂ: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕೂ ಮಳೆ ಅಡ್ಡಿಯಾಗಿದೆ.

ಭಾರೀ ಮಳೆಯಿಂದಾಗಿ ಮೂರನೇ ದಿನದಾಟ ಸ್ಥಗಿತಗೊಂಡಾಗ ಇಂಗ್ಲೆಂಡ್ ತಂಡ ಎರಡನೇ ಇನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 25 ರನ್ ಗಳಿಸಿ, 70 ರನ್‌ಗಳ ಹಿನ್ನಡೆಯಲ್ಲಿತ್ತು.

ಇದಕ್ಕೂ ಭಾರತ ತಂಡವು 278 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಇನಿಂಗ್ಸ್‌ನಲ್ಲಿ 95 ರನ್‌ಗಳ ಮುನ್ನಡೆ ಪಡೆದಿತ್ತು.

ADVERTISEMENT

84 ರನ್ ಗಳಿಸಿದ ಕೆ.ಎಲ್. ರಾಹುಲ್ ಮತ್ತು 56 ರನ್ ಕಲೆ ಹಾಕಿದ ರವೀಂದ್ರ ಜಡೇಜಾ ಭಾರತದ ಮುನ್ನಡೆಯಲ್ಲಿ ಪ್ರಮುಖ ಪಾತ್ರ ವಹಿಸಿದರು.

ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 183 ರನ್‌ಗಳಿಗೆ ಆಲೌಟ್ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.