ADVERTISEMENT

IND vs ENG 1st Test: ಇಂಗ್ಲೆಂಡ್ 578 ರನ್‌ಗಳಿಗೆ ಆಲೌಟ್

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 4:54 IST
Last Updated 7 ಫೆಬ್ರುವರಿ 2021, 4:54 IST
   

ಚೆನ್ನೈ: ಭಾರತ ವಿರುದ್ಧ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ಜೋ ರೂಟ್ (218) ಅಮೋಘ ದ್ವಿಶತಕದ ನೆರವಿನಿಂದ ಪ್ರವಾಸಿ ಇಂಗ್ಲೆಂಡ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 578 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.

ಎಂಟು ವಿಕೆಟ್ ನಷ್ಟಕ್ಕೆ 555 ಎಂಬ ಮೊತ್ತದಿಂದ ಮೂರನೇ ದಿನದಾಟ ಮುಂದುವರಿಸಿದ ಆಂಗ್ಲರ ಪಡೆ ಮತ್ತಷ್ಟು 23 ರನ್ ಪೇರಿಸುವುದರೊಳಗೆ ಉಳಿದಿರುವ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ಮೂಲಕ 190.1 ಓವರ್‌ಗಳಲ್ಲಿ578 ರನ್‌ಗಳಿಗೆ ಆಲೌಟ್ ಆಯಿತು.

ಇದನ್ನೂ ಓದಿ:

ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ನಾಯಕ ಜೋ ರೂಟ್ ಸ್ಮರಣೀಯ ದ್ವಿಶತಕ ಸಾಧನೆ ಮಾಡಿದ್ದರು. ಈ ಮೂಲಕ 100ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಪಾತ್ರವಾಗಿದ್ದರು.

ADVERTISEMENT

ಅಷ್ಟೇ ಅಲ್ಲದೆ 98, 99 ಹಾಗೂ 100ನೇ ಟೆಸ್ಟ್ ಪಂದ್ಯಗಳಲ್ಲಿ ಶತಕ ಮಾಡಿದ ಗೌರವಕ್ಕೂ ಭಾಜನವಾಗಿದ್ದರು.

ಆರಂಭಿಕ ಡಾಮಿನಿಕ್ ಸಿಬ್ಲಿ (87) ಹಾಗೂ ಆಲ್‌ರೌಂಡರ್ ಬೆನ್ ಸ್ಟೋಕ್ಸ್ (82) ಅರ್ಧಶತಕಗಳನ್ನು ಬಾರಿಸಿ ಇಂಗ್ಲೆಂಡ್ ತಂಡವು ಬೃಹತ್ ಮೊತ್ತ ಪೇರಿಸಲು ನೆರವಾದರು.

ಭಾರತದ ಪರ ಜಸ್‌ಪ್ರೀತ್ ಬೂಮ್ರಾ ಹಾಗೂ ಆರ್. ಅಶ್ವಿನ್ ತಲಾ ಮೂರು ಮತ್ತು ಇಶಾಂತ್ ಶರ್ಮಾ ಮತ್ತು ಶಹಬಾಜ್ ನದೀಂ ತಲಾ ಎರಡು ವಿಕೆಟ್‌ಗಳನ್ನು ಹಂಚಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.