ADVERTISEMENT

IND vs ENG 1st Test: ಪಂದ್ಯದ ಬಳಿಕ ಟೀಂ ಇಂಡಿಯಾ ಕಾಲೆಳೆದ ಕೆವಿನ್‌ ಪೀಟರ್ಸನ್

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 12:38 IST
Last Updated 9 ಫೆಬ್ರುವರಿ 2021, 12:38 IST
ಮಾಜಿ ಕ್ರಿಕೆಟಿಗ ಕೆವಿನ್‌ ಪೀಟರ್ಸನ್‌
ಮಾಜಿ ಕ್ರಿಕೆಟಿಗ ಕೆವಿನ್‌ ಪೀಟರ್ಸನ್‌   

ಚೆನ್ನೈ:ಇಂಗ್ಲೆಂಡ್‌ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡ ಭಾರತ ತಂಡವನ್ನು ಮಾಜಿ ಕ್ರಿಕೆಟಿಗ ಕೆವಿನ್‌ ಪೀಟರ್ಸನ್‌ ಟ್ರೋಲ್‌ ಮಾಡಿದ್ದಾರೆ.

ಚೆನ್ನೈನಲ್ಲಿ ಮುಕ್ತಾಯವಾದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಪಡೆ 227 ರನ್‌ ಅಂತರದ ಸೋಲು ಅನುಭವಿಸಿದೆ. ಅದಾದ ಬಳಿಕ ಟ್ವೀಟ್‌ ಮಾಡಿರುವ ಪೀಟರ್ಸನ್‌, ‘ಭಾರತ, ಆಸ್ಟ್ರೇಲಿಯಾವನ್ನು ಅದರ ತವರಿನಲ್ಲೇಮಣಿಸಿದ ಬಳಿಕ ಅತಿಯಾದ ವಿಶ್ವಾಸದಿಂದ ಬೀಗಬೇಡಿ ಎಂದು ನಾನು ನಿಮಗೆ ಮೊದಲೇ ಎಚ್ಚರಿಕೆ ನೀಡಿದ್ದೆ ನೆನಪಿಸಿಕೊಳ್ಳಿʼ ಎಂದು ಕಾಲೆಳೆದಿದ್ದಾರೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಇಂಗ್ಲೆಂಡ್‌ ಮೊದಲ ಇನಿಂಗ್ಸ್‌ನಲಿ 578 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಭಾರತ 337 ರನ್‌ ಗಳಿಸಿ ಆಲೌಟ್‌ ಆಗಿತ್ತು. ಟೀಂ ಇಂಡಿಯಾಗೆ ಫಾಲೋಆನ್‌ ಹೇರದೆ ಎರಡನೇ ಇನಿಂಗ್ಸ್‌ ಆರಂಭಿಸಿದ್ದ ಇಂಗ್ಲೆಂಡ್‌ 178 ರನ್‌ಗಳಿಗೆ ಸರ್ವಪತನ ಕಂಡಿತ್ತು.

ಹೀಗಾಗಿ 420 ರನ್‌ಗಳ ಬೃಹತ್‌ ಗುರಿಎದುರು ಬ್ಯಾಟಿಂಗ್‌ ನಡೆಸಿದ ಭಾರತ 192 ರನ್‌ ಗಳಿಸಲಷ್ಟೇ ಶಕ್ತವಾಯಿತು. ನಾಯಕ ವಿರಾಟ್‌ ಕೊಹ್ಲಿ (72) ಮತ್ತು ಶುಭಮನ್‌ ಗಿಲ್‌ (50) ಅರ್ಧಶತಕ ಗಳಿಸಿ, ಅಲ್ಪ ಪ್ರತಿರೋಧ ತೋರಿದರು.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆಡಿದ್ದ ಭಾರತ, ಸರಣಿಯನ್ನು 2-1 ಅಂತರದಿಂದ ಜಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.