ADVERTISEMENT

IND vs ENG: ರೋಹಿತ್‌ಗೆ ಕೋವಿಡ್; ಬುಮ್ರಾಗೆ ನಾಯಕ ಪಟ್ಟ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜೂನ್ 2022, 13:11 IST
Last Updated 29 ಜೂನ್ 2022, 13:11 IST
ಜಸ್‌ಪ್ರೀತ್ ಬೂಮ್ರಾ ಹಾಗೂ ರೋಹಿತ್ ಶರ್ಮಾ
ಜಸ್‌ಪ್ರೀತ್ ಬೂಮ್ರಾ ಹಾಗೂ ರೋಹಿತ್ ಶರ್ಮಾ   

ಎಜ್‌ಬಾಸ್ಟನ್: ಕೋವಿಡ್‌ನಿಂದ ಬಳಲುತ್ತಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ಅನುಪಸ್ಥಿತಿಯಲ್ಲಿ ಜಸ್‌ಪ್ರೀತ್ ಬೂಮ್ರಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಟೀಮ್ ಮೀಟಿಂಗ್‌ನಲ್ಲಿ ಬೂಮ್ರಾಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಈ ಮೂಲಕ ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿದ ಮೊದಲ ವೇಗದ ಬೌಲರ್ ಎಂಬ ಖ್ಯಾತಿಗೆ ಬೂಮ್ರಾ ಪಾತ್ರರಾಗಲಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವು ಎಜ್‌ಬಾಸ್ಟನ್ ಮೈದಾನದಲ್ಲಿ ಜುಲೈ 1ರಿಂದ ಆರಂಭವಾಗಲಿದೆ.

ಕಳೆದ ಭಾನುವಾರ ರೋಹಿತ್ ಶರ್ಮಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರೀಗತಂಡವು ತಂಗಿರುವಹೋಟೆಲ್‌ನಲ್ಲಿ ಪ್ರತ್ಯೇಕವಾಸದಲ್ಲಿದ್ದಾರೆ.

ರೋಹಿತ್ ಅವರ ಸ್ಥಾನ ತುಂಬಲು ಕನ್ನಡಿಗ ಮಯಂಕ್ ಅಗರವಾಲ್ ಅವರಿಗೆ ಬುಲಾವ್ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.