ADVERTISEMENT

IND vs ENG: ಭಾರತ 286ಕ್ಕೆ ಆಲೌಟ್, ಇಂಗ್ಲೆಂಡ್‌ ಗೆಲುವಿಗೆ 482 ರನ್ ಗುರಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 10:44 IST
Last Updated 15 ಫೆಬ್ರುವರಿ 2021, 10:44 IST
ಆರ್.ಅಶ್ವಿನ್ ಬ್ಯಾಟಿಂಗ್ – ಪಿಟಿಐ ಚಿತ್ರ
ಆರ್.ಅಶ್ವಿನ್ ಬ್ಯಾಟಿಂಗ್ – ಪಿಟಿಐ ಚಿತ್ರ   

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 286 ರನ್‌ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್‌ಗೆ ಪಂದ್ಯ ಗೆಲ್ಲಲು 482 ರನ್ ಗುರಿ ನೀಡಿದೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆರಂಭಿಕ ಕುಸಿತಕ್ಕೊಳಗಾದರೂ ಆರ್.ಅಶ್ವಿನ್ ಆಕರ್ಷಕ ಶತಕ (106), ನಾಯಕ ವಿರಾಟ್ ಕೊಹ್ಲಿ (62) ಅರ್ಧಶತಕದ ನೆರವಿನಿಂದ ಮೂರನೇ ದಿನದಾಟದ ಕೊನೆಯ ಅವಧಿಯಲ್ಲಿ ಭಾರತ ತಂಡವು ಉತ್ತಮ ಮೊತ್ತ ಪೇರಿಸಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 195 ರನ್‌ಗಳ ಬೃಹತ್ ಮುನ್ನಡೆ ಪಡೆದಿತ್ತು. ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಇಂಗ್ಲೆಂಡ್ ಪಾಲಿಗೆ ರನ್ ಚೇಸ್ ಮಾಡುವುದು ಕಷ್ಟಕರವಾಗಲಿದೆ ಎಂದು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವು ಸಾಧಿಸಿತ್ತು.

ಅಶ್ವಿನ್ ಸಾಧನೆ

ದ್ವಿತೀಯ ಇನ್ನಿಂಗ್ಸ್‌ನ ಮೊದಲ ಹಂತದಲ್ಲಿ ಕುಸಿತ ಕಂಡಿದ್ದ ತಂಡಕ್ಕೆ ಅಶ್ವಿನ್ ಆಸರೆಯಾದರು. ಆಕರ್ಷಕ ಬ್ಯಾಟಿಂಗ್‌ ಮಾಡಿದ ಅವರು 148 ಎಸೆತಗಳಲ್ಲಿ 106 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ಗಮನಾರ್ಹ ಕೊಡುಗೆ ನೀಡಿದರು. ಜತೆಗೆ, ಒಂದೇ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಹಾಗೂ ಶತಕದ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾದರು. ಅಶ್ವಿನ್ ಅವರು ಈ ಸಾಧನೆ ಮಾಡುತ್ತಿರುವುದು ಇದು ಮೂರನೇ ಬಾರಿ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.