ಯಶಸ್ವಿ ಜೈಸ್ವಾಲ್
(ರಾಯಿಟರ್ಸ್ ಚಿತ್ರ)
ಲೀಡ್ಸ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಶತಕದ ಸಾಧನೆ ಮಾಡಿದ್ದಾರೆ.
ಆ ಮೂಲಕ ಇಂಗ್ಲೆಂಡ್ ನೆಲದಲ್ಲಿ ತಾವು ಆಡಿದ ಚೊಚ್ಚಲ ಪಂದ್ಯದಲ್ಲೇ ಶತಕ ಗಳಿಸಿದ ಹಿರಿಮೆಗೆ ಭಾಜನರಾಗಿದ್ದಾರೆ.
ಇದರೊಂದಿಗೆ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರೊಂದಿಗೆ ಎಲೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. 1996ರಲ್ಲಿ ಗಂಗೂಲಿ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಶತಕ (131) ಸಾಧನೆ ಮಾಡಿದ್ದರು.
ಲೀಡ್ಸ್‌ನಲ್ಲಿ ಇಂದು ಆರಂಭವಾಗಿರುವ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್, ಅಮೋಘ ಇನಿಂಗ್ಸ್ ಕಟ್ಟಿದರು.
ಇಂಗ್ಲೆಂಡ್ ಬೌಲರ್‌ಗಳನ್ನು ಸಮರ್ಥವಾಗಿ ಎದರಿಸಿದ ಜೈಸ್ವಾಲ್, ಟೆಸ್ಟ್ ಕ್ರಿಕೆಟ್‌ನಲ್ಲಿ ಐದನೇ ಶತಕ ಗಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.