ADVERTISEMENT

ಭಾರತದ ಸೋಲಿನ ನಡುವೆಯೂ ದಾಖಲೆ ಬರೆದ ಯಜುವೇಂದ್ರ ಚಾಹಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2021, 10:40 IST
Last Updated 13 ಮಾರ್ಚ್ 2021, 10:40 IST
ಯಜುವೇಂದ್ರ ಚಾಹಲ್
ಯಜುವೇಂದ್ರ ಚಾಹಲ್   

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟ್ವೆಂಟಿ-20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿರಬಹುದು.

ವೈಯಕ್ತಿಕವಾಗಿ 44 ರನ್ ಬಿಟ್ಟು ಕೊಟ್ಟಿರುವ ಯಜುವೇಂದ್ರ ಚಾಹಲ್ ಅತಿ ದುಬಾರಿ ಎನಿಸಿಕೊಂಡಿರಬಹುದು. ಆದರೆ ಪಂದ್ಯದಲ್ಲಿ ಒಂದು ವಿಕೆಟ್ ಪಡೆಯುವ ಪಡೆಯುವ ಮೂಲಕ ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ.

ಟ್ವೆಂಟಿ-20 ಅಂತರ ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಯಜುವೇಂದ್ರ ಚಾಹಲ್ ಪಾತ್ರವಾಗಿದ್ದಾರೆ.

ADVERTISEMENT

ಪ್ರಸ್ತುತ ಪಟ್ಟಿಯಲ್ಲಿ ಜಸ್‌ಪ್ರೀತ್ ಬೂಮ್ರಾ ದಾಖಲೆಯನ್ನು ಚಹಲ್ ಮುರಿದಿದ್ದಾರೆ. ಮದುವೆ ಸಿದ್ಧತೆಯಲ್ಲಿರುವ ಬೂಮ್ರಾ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

ಇದುವರೆಗೆ 46 ಪಂದ್ಯಗಳನ್ನು ಆಡಿರುವ ಚಾಹಲ್ ಒಟ್ಟು 60 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಚುಟುಕು ಪ್ರಕಾರದಲ್ಲಿ ಭಾರತದ ಅತಿ ಯಶಸ್ವಿ ಬೌಲರ್ ಎಂದೆನಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಬೂಮ್ರಾ 50 ಪಂದ್ಯಗಳಲ್ಲಿ 59 ವಿಕೆಟ್‌ಗಳನ್ನು ಪಡೆದಿದ್ದಾರೆ.

ಒಟ್ಟಾರೆಯಾಗಿ ಅಂತರ ರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯು ಶ್ರೀಲಂಕಾದ ಹಿರಿಯ ವೇಗಿ ಲಸಿತ್ ಮಾಲಿಂಗ ಹೆಸರಲ್ಲಿದೆ. ಮಾಲಿಂಗ 84 ಪಂದ್ಯಗಳಲ್ಲಿ ಒಟ್ಟು 107 ವಿಕೆಟ್‌ಗಳನ್ನು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.