ADVERTISEMENT

IND vs NZ 1st T20I: ವೆಂಕಟೇಶ್ ಪದಾರ್ಪಣೆ; ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ನವೆಂಬರ್ 2021, 13:25 IST
Last Updated 17 ನವೆಂಬರ್ 2021, 13:25 IST
ರೋಹಿತ್ ಶರ್ಮಾ
ರೋಹಿತ್ ಶರ್ಮಾ   

ಜೈಪುರ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಇಲ್ಲಿನ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಇದೀಗಷ್ಟೇ ಯುಎಇನಲ್ಲಿಅಂತ್ಯಗೊಂಡ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದ್ದ ನ್ಯೂಜಿಲೆಂಡ್, ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

ಅತ್ತ ಭಾರತ ತಂಡವು ಕನಿಷ್ಠ ಸೆಮಿಫೈನಲ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲವಾಗಿತ್ತು. ಟಿ20 ವಿಶ್ವಕಪ್ ಬೆನ್ನಲ್ಲೇ ವಿರಾಟ್ ಕೊಹ್ಲಿ ನಾಯಕತ್ವವನ್ನು ತೊರೆದಿದ್ದರು.

ADVERTISEMENT

ಈಗ ರೋಹಿತ್ ಶರ್ಮಾ ಸಾರಥ್ಯದಲ್ಲಿ ಭಾರತ ಕಣಕ್ಕಿಳಿಯುತ್ತಿದೆ. ಹಾಗೆಯೇ ನೂತನ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಕಿವೀಸ್ ವಿರುದ್ಧ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

ವೆಂಕಟೇಶ್ ಅಯ್ಯರ್ ಪದಾರ್ಪಣೆ...
ಭಾರತದ ಪರ ವೆಂಕಟೇಶ್ ಅಯ್ಯರ್ ಪದಾರ್ಪಣೆ ಮಾಡಿದ್ದಾರೆ. ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ದೀಪಕ್ ಚಾಹರ್ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ಲೇಯಿಂಗ್ ಇಲೆವೆನ್:

ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್ ಮತ್ತು ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೆರಿಲ್ ಮಿಚೆಲ್, ಮಾರ್ಕ್ ಚಾಪ್‌ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಟಾಡ್ ಆಶ್ಟ್ಲೆ, ಲಾಕಿ ಫರ್ಗ್ಯೂಸನ್ ಮತ್ತು ಟ್ರೆಂಟ್ ಬೌಲ್ಟ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.