IND vs NZ
ಚಿತ್ರ ಕೃಪೆ: ಐಸಿಸಿ ಎಕ್ಸ್ ಖಾತೆ
ಬೆಂಗಳೂರು: ಭಾರತ ಕ್ರಿಕೆಟ್ ತಂಡವು 12 ವರ್ಷಗಳ ನಂತರ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಕ್ಷಣಕ್ಕೆ ಸಾಕ್ಷಿಯಾಗಲು ಭಾರತದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಇಂದು (ಭಾನುವಾರ) ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ನ್ಯೂಜಿಲ್ಯಾಂಡ್‌ನ ಮಿಚೆಲ್ ಸ್ಯಾಂಟನರ್ ಬಳಗವನ್ನು ಎದುರಿಸಲಿದೆ.
ಭಾರತ ತಂಡದ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇನ್ನೂ ಕೆಲವು ಅಭಿಮಾನಿಗಳು ವಿಶಿಷ್ಟವಾಗಿ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.
ಉತ್ತರ ಪ್ರದೇಶದ ವಾರಾಣಸಿಯ ದೇವಸ್ಥಾನದಲ್ಲಿ ನೂರಾರು ಅಭಿಮಾನಿಗಳು ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಜತೆಗೆ ಟೀಂ ಇಂಡಿಯಾ ಆಟಗಾರರಿಗೆ ಶುಭ ಕೋರಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಮರಳು ಕಲಾಕೃತಿ ರಚಿಸಿ ಟೀಂ ಇಂಡಿಯಾಕ್ಕೆ ಶುಭ ಕೋರಿದ್ದಾರೆ.
ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಬೇಕು. ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಭಾವಿಸುತ್ತೇನೆ ಎಂದು ಏಷ್ಯನ್ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಕಂಚು ವಿಜೇತ ಬಾಕ್ಸರ್ ಮನೀಷಾ ಮೌನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದ ಟೀಂ ಇಂಡಿಯಾ ಆಟಗಾರರಿಗೆ ಬಾಲಕರು ಶುಭ ಕೋರಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ಟೀಂ ಇಂಡಿಯಾ ಗೆಲುವಿಗಾಗಿ ಕ್ರಿಕೆಟ್ ಅಭಿಮಾನಿಗಳಿಂದ ಪೂಜೆ, ಪ್ರಾರ್ಥನೆ ಸಲ್ಲಿಕೆ.
ಟೀಂ ಇಂಡಿಯಾ ಗೆಲುವಿಗಾಗಿ ಶಾಲಾ ಮಕ್ಕಳು ಮಾನವ ಸರಪಳಿ ಮೂಲಕ ಟ್ರೋಫಿ ಚಿತ್ರಣ ರಚಿಸಿ, ವಿಶಿಷ್ಟವಾಗಿ ಶುಭ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.