ADVERTISEMENT

IND vs NZ T20| ಅಭಿಷೇಕ್, ರಿಂಕು ಸ್ಫೋಟಕ ಬ್ಯಾಟಿಂಗ್: ಕಿವೀಸ್‌ಗೆ ಬೃಹತ್ ಗುರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2026, 15:45 IST
Last Updated 21 ಜನವರಿ 2026, 15:45 IST
<div class="paragraphs"><p>ಅಭಿಷೇಕ್ ಶರ್ಮಾ</p></div>

ಅಭಿಷೇಕ್ ಶರ್ಮಾ

   

ನಾಗಪುರ: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಹಾಗೂ ಫಿನಿಷರ್ ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿತು. ಆ ಮೂಲಕ ನ್ಯೂಜಿಲೆಂಡ್ ಗೆಲುವಿಗೆ 239 ರನ್ ಟಾರ್ಗೆಟ್ ನೀಡಿದೆ.

ADVERTISEMENT

ಭಾರತದ ಪರ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ 8 ಸಿಕ್ಸರ್, 4 ಬೌಂಡರಿ ನೆರವಿನಿಂದ 84 ರನ್ ಕಲೆಹಾಕಿದರು. ಹಾಗೂ ಇನಿಂಗ್ಸ್ ಕೊನೆಯಲ್ಲಿ ರಿಂಕು ಸಿಂಗ್ 20 ಎಸೆತಗಳಲ್ಲಿ 3 ಸಿಕ್ಸ್, 4 ಬೌಂಡರಿ ನೆರವಿನಿಂದ ಅಜೇಯ 44 ರನ್ ಕಲೆಹಾಕಿದರು.

ಆರಂಭಿಕ ಆಘಾತದ ಹೊರತಾಗಿಯೂ, ನಾಯಕ ಸೂರ್ಯಕುಮಾರ್ ಯಾದವ್ (32 ರನ್), ಹಾರ್ದಿಕ್ ಪಾಂಡ್ಯ (25 ರನ್) ಕಲೆಹಾಕುವ ಮೂಲಕ ತಂಡವನ್ನು ಕುಸಿತದಿಂದ ಪಾರು ಮಾಡಿದರು.

ನ್ಯೂಜಿಲೆಂಡ್ ಪರ ಜಾಕೋಬ್ ಡಫಿ ಹಾಗೂ ಕೈಲ್ ಜೇಮಿಸನ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಕ್ರಿಸ್ಟಿಯನ್ ಕ್ಲಾರ್ಕ್, ಇಶ್ ಸೋಧಿ ಹಾಗೂ ಮಿಚೆಲ್ ಸ್ಯಾಂಟನರ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.