ADVERTISEMENT

IND vs SA 1st Test: ಎರಡನೇ ದಿನ ಮಳೆಯದ್ದೇ ಆಟ!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2021, 12:47 IST
Last Updated 27 ಡಿಸೆಂಬರ್ 2021, 12:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸೆಂಚುರಿಯನ್: ಭಾರತ ಹಾಗೂ ಅತಿಥೇಯ ದಕ್ಷಿಣ ಆಫ್ರಿಕಾ ನಡುವಣ ಪ್ರಥಮ ಟೆಸ್ಟ್ ಪಂದ್ಯದ ಎರಡನೇ ದಿನದಾಟಕ್ಕೆ ಮಳೆ ಅಡಚಣೆಯಾಗಿದೆ.

ಪರಿಣಾಮ ಒಂದೇ ಒಂದು ಎಸೆತವನ್ನು ಕಾಣದೇದಿನದಾಟವನ್ನು ರದ್ದುಗೊಳಿಸಲಾಗಿದೆ. ಮೊದಲ ದಿನದಾಟದ ಅಂತ್ಯಕ್ಕೆ ಭಾರತ ತಂಡವು 90 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತ್ತು.

ಬೆಳಗಿನ ಜಾವದಿಂದಲೇ ಮಳೆ ಸುರಿದಿದ್ದರಿಂದ ದಿನದಾಟ ಆರಂಭವಾಗಲೇ ಇಲ್ಲ. ಇದರಿಂದಾಗಿ ಭೋಜನ ವಿರಾಮವನ್ನು ಬೇಗನೇ ತೆಗೆದುಕೊಳ್ಳಲಾಯಿತು. ಬಳಿಕ ಸ್ಥಳೀಯ ಕಾಲಮಾನ 1.30ಕ್ಕೆ ಮೈದಾನ ಪರಿಶೀಲಿಸಿದ ಅಂಪೈರ್‌ಗಳು, ದಿನದಾಟ ಸ್ಥಗಿತಗೊಳಿಸುವ ಘೋಷಣೆ ಮಾಡಿದರು.

ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ಮೊದಲ ದಿನದಾಟದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಕನ್ನಡಿಗ ಕೆ.ಎಲ್. ರಾಹುಲ್, ಟೆಸ್ಟ್ ವೃತ್ತಿ ಜೀವನದಲ್ಲಿ ಏಳನೇ ಶತಕ ಗಳಿಸಿದರು.

122 ರನ್ ಗಳಿಸಿರುವ ರಾಹುಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅವರಿಗೆ ಸಾಥ್ ನೀಡುತ್ತಿರುವ ಅಜಿಂಕ್ಯ ರಹಾನೆ 40 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ. ಮಯಂಕ್ ಅಗರವಾಲ್ ಸಹ ಆಕರ್ಷಕ ಅರ್ಧಶತಕ (60) ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.