ಮೂರನೇ ಏಕದಿನ ಪಂದ್ಯದಲ್ಲಿ ಟಾಸ್
ಚಿತ್ರ: @ESPNcricinfo
ವಿಶಾಖಪಟ್ಟಣ: ಮೂರು ಪಂದ್ಯಗಳ ಏಕದಿನ ಸರಣಿ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ನಾಯಕ ಕೆ.ಎಲ್. ರಾಹುಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಸತತ 20 ಪಂದ್ಯಗಳಿಂದ ಟಾಸ್ ಸೋತಿದ್ದ ಭಾರತ ತಂಡ 21ನೇ ಪಂದ್ಯದಲ್ಲಿ ಟಾಸ್ ಗೆದ್ದಿದೆ.
ಭಾರತ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಲಾಗಿದ್ದು, ವಾಷಿಂಗ್‌ಟನ್ ಸುಂದರ್ ಬದಲು ತಿಲಕ್ ವರ್ಮಾ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಅತ್ತ ದಕ್ಷಿಣ ಆಫ್ರಿಕಾ ತಂಡದಲ್ಲೂ ಗಾಯಾಳುಗಳಾದ ಡಿ ಜಾರ್ಜ್ ಹಾಗೂ ಬರ್ಜರ್ ತಂಡದಿಂದ ಹೊರಬಿದ್ದಿದ್ದು, ಅವರ ಬದಲು ರಿಯಾನ್ ರಿಕಲ್ಟನ್ ಹಾಗೂ ಒರ್ಟಿನೆಲ್ ಒಟ್ನೀಲ್ ಬಾರ್ಟ್ಮನ್ ಸ್ಥಾನ ಪಡೆದಿದ್ದಾರೆ.
ಭಾರತ ಆಡುವ 11ರ ಬಳಗ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಲ್ ರಾಹುಲ್(ವಿಕೆಟ್ ಕೀಪರ್/ ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ
ದಕ್ಷಿಣ ಆಫ್ರಿಕಾ ಆಡುವ 11ರ ಬಳಗ: ರಿಯಾನ್ ರಿಕಲ್ಟನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ತೆಂಬಾ ಬವುಮಾ (ನಾಯಕ), ಮ್ಯಾಥ್ಯೂ ಬ್ರೀಟ್ಜ್ಕೆ, ಐಡೆನ್ ಮರ್ಕ್ರಂ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಒಟ್ನೀಲ್ ಬಾರ್ಟ್ಮನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.