ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಮೊದಲ ಟಿ20 ಕ್ರಿಕೆಟ್ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾಕ್ಕೆ 212 ರನ್ಗಳ ಬೃಹತ್ ಗುರಿ ನೀಡಿದೆ.
ಸ್ಫೋಟಕ ಬ್ಯಾಟಿಂಗ್ ಮಾಡಿದ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ 48 ಎಸೆತಗಳಲ್ಲಿ 11 ಬೌಂಡರಿ ಮತ್ತು 3 ಸಿಕ್ಸರ್ ಸಹಿತ 76 ರನ್ ಸಿಡಿಸಿದರು. ಶ್ರೇಯಸ್ ಅಯ್ಯರ್ ಮತ್ತು ನಾಯಕ ರಿಷಬ್ ಪಂತ್ ಕ್ರಮವಾಗಿ 36 ಮತ್ತು 29 ರನ್ ಸಿಡಿಸುವ ಮೂಲಕ ಉತ್ತಮ ಸಾಥ್ ನೀಡಿದರು.
ಅಂತ್ಯದಲ್ಲಿ ಅಬ್ಬರಿಸಿದ ಹಾರ್ದಿಕ್ ಪಾಂಡ್ಯಾ 12 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಿತ 31 ರನ್ ಸಿಡಿಸಿ ಅಬ್ಬರಿಸಿದರು.
20 ಓವರ್ಗಳ ಅಂತ್ಯಕ್ಕೆ ಭಾರತ 4 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು.
ಸ್ಕೋರ್ ವಿವರ:
ಇಶಾನ್ ಕಿಶನ್: 76 ರನ್
ಶ್ರೇಯಸ್ ಅಯ್ಯರ್ : 36
ಹಾರ್ದಿಕ್ ಪಾಂಡ್ಯಾ: ಅಜೇಯ 31 ರನ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.