ಸಂಜು ಸ್ಯಾಮ್‌ಸನ್
ಕೇಪ್‌ಟೌನ್: ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳ ನಡುವೆ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾಗೆ 297 ರನ್‌ಗಳ ಗೆಲುವಿನ ಗುರಿ ನೀಡಿದೆ.
ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 296 ರನ್ ಗಳಿಸಿತು.
ಸಂಜು ಸ್ಯಾಮ್‌ಸನ್ ಹಾಗೂ ತಿಲಕ್ ವರ್ಮಾ ಅವರ ಜೊತೆಯಾಟದಿಂದಾಗಿ ಭಾರತ ಉತ್ತಮ ಮೊತ್ತ ದಾಖಲಿಸಲು ಸಾಧ್ಯವಾಯಿತು. ಸಂಜು ಶತಕ ಸಿಡಿಸಿದರೆ, ತಿಲಕ್ ವರ್ಮಾ ಅರ್ಧ ಶತಕ ದಾಖಲಿಸಿದರು.
ದಕ್ಷಿಣ ಆಫ್ರಿಕಾ ಪರವಾಗಿ ಬೇರನ್ ಹೆನ್ರಿಕ್ಸ್ 3, ನಾಂದ್ರೆ ಬರ್ಗರ್ ಎರಡು ವಿಕೆಟ್ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.