
ಗುವಾಹಟಿ: ದಕ್ಷಿಣ ಆಫ್ರಿಕಾ ತಂಡದ ವೇಗಿ ಕಗಿಸೊ ರಬಾಡ ಭಾರತ ವಿರುದ್ಧದ ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಅಭ್ಯಾಸ ನಡೆಸುವಾಗ ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದರು. ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆ ಅವರು ಸರಣಿಯ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ.
ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ, ‘ಗಾಯದಿಂದಾಗಿ ಮೊದಲ ಟೆಸ್ಟ್ ಪಂದ್ಯ ತಪ್ಪಿಸಿಕೊಂಡಿದ್ದ ರಬಾಡ ಅವರು ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ’ ಎಂದು ತಿಳಿಸಿದ್ದಾರೆ.
ಗುವಾಹಟಿ ಪಿಚ್ ನೋಡಿದರೆ, ಇದು ಮೊದಲ ಎರಡು ದಿನ ಬ್ಯಾಟಿಂಗ್‌ಗೆ ಸಹಾಯ ಮಾಡುವ ಸಾಧ್ಯತೆ ಇದೆ. ನಂತರ ಮೂರನೇ ದಿನದಿಂದ ನಿಧಾನಗತಿಯ ಬೌಲರ್‌ಗಳಿಗೆ ಅನೂಕಲವಾಗುವ ಸಾಧ್ಯತೆ ಇದೆ ಎಂದು ಬವುಮಾ ಹೇಳಿದರು.
‘ಈ ಪಿಚ್ ಹೊಸದಾಗಿದೆ ಮತ್ತು ಕೊಲ್ಕತ್ತಗೆ ಹೋಲಿಸಿದರೆ ಹೆಚ್ಚು ಸ್ಥಿರವಾಗಿರುವಂತೆ ಕಾಣಿಸುತ್ತಿದೆ. ನಾವು ಬೆಳಿಗ್ಗೆ ಮತ್ತೊಮ್ಮೆ ಪಿಚ್ ನೋಡಿಕೊಂಡು ರಬಾಡ ಬದಲು ಯಾರನ್ನು ಆಡಿಸಬೇಕು ಎಂಬುದನ್ನು ನಿರ್ಧರಿಸುತ್ತೇವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.