ADVERTISEMENT

Rohit Sharma| 20,000 ರನ್ ಮೈಲಿಗಲ್ಲು: ಸಚಿನ್, ಕೊಹ್ಲಿ ಸಾಲಿಗೆ ರೋಹಿತ್ ಶರ್ಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2025, 3:17 IST
Last Updated 7 ಡಿಸೆಂಬರ್ 2025, 3:17 IST
<div class="paragraphs"><p>ರೋಹಿತ್ ಶರ್ಮಾ</p></div>

ರೋಹಿತ್ ಶರ್ಮಾ

   

(ಪಿಟಿಐ ಚಿತ್ರ)

ವಿಶಾಖಪಟ್ಟಣ: 'ಹಿಟ್‌ಮ್ಯಾನ್' ಖ್ಯಾತಿಯ ರೋಹಿತ್ ಶರ್ಮಾ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ರನ್‌ಗಳ ಸಾಧನೆ ಮಾಡಿದ್ದಾರೆ.

ADVERTISEMENT

ಆ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿದ್ದಾರೆ.

ಅಲ್ಲದೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಹಾಗೂ ರೋಹಿತ್ ಶರ್ಮಾ ಅವರೊಂದಿಗೆ ಎಲೈಟ್ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಒಟ್ಟಾರೆಯಾಗಿ ವಿಶ್ವದ 14ನೇ ಬ್ಯಾಟರ್ ಎನಿಸಿದ್ದಾರೆ.

38 ವರ್ಷದ ರೋಹಿತ್, ವಿಶಾಖಪಟ್ಟಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿದರು.

ರೋಹಿತ್ 73 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು. ಅಲ್ಲದೆ ಯಶಸ್ವಿ ಜೈಸ್ವಾಲ್ ಜೊತೆ ಮೊದಲ ವಿಕೆಟ್‌ಗೆ 155 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿ:

  • ಸಚಿನ್ ತೆಂಡೂಲ್ಕರ್: 34,357

  • ವಿರಾಟ್ ಕೊಹ್ಲಿ: 27,910

  • ರಾಹುಲ್ ದ್ರಾವಿಡ್: 24,208

  • ರೋಹಿತ್ ಶರ್ಮಾ: 20,000

  • ಸೌರವ್ ಗಂಗೂಲಿ: 18,433

  • ಮಹೇಂದ್ರ ಸಿಂಗ್: 17,092

ಈ ಪೈಕಿ ರೋಹಿತ್ ಏಕದಿನದಲ್ಲಿ 11,516, ಟೆಸ್ಟ್‌ನಲ್ಲಿ 4,301 ಹಾಗೂ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4,231 ರನ್ ಗಳಿಸಿದ್ದಾರೆ.

ರೋಹಿತ್ ಶರ್ಮಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.