ಭಾರತ ಹಾಗೂ ದ.ಆಫ್ರಿಕಾ ನಾಯಕರು
ಚಿತ್ರ: @IndianSportFan
ರಾಜ್‌ಪುರ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಭಾರತ ತಂಡ ಮತ್ತೊಮ್ಮೆ ಟಾಸ್ ಸೋತಿದೆ.
ಭಾರತ ತಂಡ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆದರೆ, ದಕ್ಷಿಣ ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ತೆಂಬಾ ಬವುಮಾ, ಕೇಶವ್ ಮಹಾರಾಜ್ ಹಾಗೂ ಲುಂಗಿ ಎನ್‌ಗಿಡಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ತಂಡಗಳು:
ದಕ್ಷಿಣ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಂ, ತೆಂಬಾ ಬವುಮಾ (ನಾಯಕ), ಮ್ಯಾಥ್ಯೂ ಬ್ರೀಟ್ಜ್ಕೆ, ಟೋನಿ ಡಿ ಜೊರ್ಜಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲುಂಗಿ ಎನ್‌ಗಿಡಿ ತಂಡದಲ್ಲಿದ್ದಾರೆ.
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕವಾಡ್, ವಾಷಿಂಗ್‌ಟನ್ ಸುಂದರ್, ಕೆ.ಎಲ್. ರಾಹುಲ್(ನಾಯಕ/ವಿಕೆಟ್ ಕೀಪರ್) ರವೀಂದ್ರ ಜಡೇಜ, ಹರ್ಷಿತ್ ರಾಣಾ, ಕುಲದೀಪ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ತಂಡದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.