ADVERTISEMENT

IND vs SL: ಬೆಂಗಳೂರಿನಲ್ಲಿ ಪಿಂಕ್ ಬಾಲ್ ಟೆಸ್ಟ್; ಭಾರತಕ್ಕೆ ಆರಂಭಿಕ ಆಘಾತ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 10:50 IST
Last Updated 12 ಮಾರ್ಚ್ 2022, 10:50 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಭಾರತ ಆರಂಭಿಕ ಆಘಾತಕ್ಕೊಳಗಾಗಿದೆ.

ಟೀ ವಿರಾಮದ ಹೊತ್ತಿಗೆ 29 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿದೆ. ರಿಷಬ್ ಪಂತ್ (16*) ಹಾಗೂ ಶ್ರೇಯಸ್ ಅಯ್ಯರ್ (1) ಕ್ರೀಸಿನಲ್ಲಿದ್ದಾರೆ.

ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಮಯಂಕ್ ಅಗರವಾಲ್ (4) ರನೌಟ್‌ ಆದರು. ನಾಯಕ ರೋಹಿತ್ ಶರ್ಮಾ (15) ಅವರಿಗೂ ಮಿಂಚಲಾಗಲಿಲ್ಲ.

ADVERTISEMENT

ಹನುಮ ವಿಹಾರಿ ಹಾಗೂ ವಿರಾಟ್ ಕೊಹ್ಲಿ 47 ರನ್‌ಗಳ ಉಪಯುಕ್ತ ಜೊತೆಯಾಟ ಕಟ್ಟಿದರೂ ಟೀ ವಿರಾಮಕ್ಕೆ ಕೆಲವೇ ಹೊತ್ತು ಇರುವಾಗ ಇಬ್ಬರೂ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು.

ವಿಹಾರಿ 31 ಹಾಗೂ ಕೊಹ್ಲಿ 23 ರನ್ ಗಳಿಸಿ ಔಟ್ ಆದರು. ಇದರೊಂದಿಗೆ ಕೊಹ್ಲಿಯ 71ನೇ ಟೆಸ್ಟ್ ಶತಕ ಎದುರು ನೋಡುತ್ತಿದ್ದ ಅಭಿಮಾನಿಗಳಿಗೂ ನಿರಾಸೆ ಕಾದಿತ್ತು.

ಲಂಕಾ ಪರ ಲಸಿತ್ ಎಂಬುಲದೆನಿಯಾ, ಪ್ರವೀಣ್ ಜಯವಿರ್ಕಮ ಹಾಗೂ ಧನಂಜಯ ಡಿಸಿಲ್ವ ತಲಾ ಒಂದು ವಿಕೆಟನ್ನು ಹಂಚಿಕೊಂಡರು.

ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.