ಅಹಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಿರುವ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಭಾರತ ತಂಡದಲ್ಲಿ ನಾಲ್ಕು ಬದಲಾವಣೆಗಳನ್ನು ತರಲಾಗಿದೆ. ಕೆ.ಎಲ್. ರಾಹುಲ್, ದೀಪಕ್ ಹೂಡಾ ಹಾಗೂ ಯಜುವೇಂದ್ರ ಚಹಾಲ್ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ.
ಅವರ ಸ್ಥಾನಗಳಲ್ಲಿ ಶಿಖರ್ ಧವನ್, ಶ್ರೇಯಸ್ ಅಯ್ಯರ್, ದೀಪಕ್ ಚಾಹರ್ ಮತ್ತು ಕುಲ್‌ದೀಪ್ ಯಾದವ್ ಅವರನ್ನು ಸೇರ್ಪಡೆಗೊಳಿಸಲಾಗಿದೆ.
ಅತ್ತ ಗಾಯದ ಸಮಸ್ಯೆಗೆ ಒಳಗಾಗಿರುವ ಕೀರನ್ ಪೊಲಾರ್ಡ್‌ಗೆ ವಿಶ್ರಾಂತಿ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸತತ ಎರಡನೇ ಪಂದ್ಯದಲ್ಲೂ ನಿಕೋಲಸ್ ಪೂರನ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ತಂಡದಲ್ಲಿ ಅಕೀಲ್ ಹುಸೇನ್ ಬದಲು ಹೇಡನ್ ವಾಲ್ಶ್ ಸ್ಥಾನ ಪಡೆದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 2-0 ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಅಂತಿಮ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್‌ಸ್ವೀಪ್‌ಗೈಯುವ ಇರಾದೆಯಲ್ಲಿದೆ.
ಪ್ಲೇಯಿಂಗ್ ಇಲೆವೆನ್ ಇಂತಿದೆ:
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ.
ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಂಡನ್ ಕಿಂಗ್, ಡ್ಯಾರೆನ್ ಬ್ರಾವೊ, ಶಾಮ್ರಾ ಬ್ರೂಕ್ಸ್, ಜೇಸನ್ ಹೋಲ್ಡನ್, ಫ್ಯಾಬಿಯನ್ ಅಲೆನ್, ಒಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಹೇಡನ್ ವಾಲ್ಶ್ ಮತ್ತು ಕೆಮರ್ ರೋಚ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.