ಫ್ಲೋರಿಡಾ: ಭಾರತ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ನಾಯಕ ರೋವ್ಮನ್ ಪೊವೆಲ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಕಳೆದ ಪಂದ್ಯ ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.
ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ಟೀಮ್ ಇಂಡಿಯಾ ಮೂರನೇ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ತಿರುಗೇಟು ನೀಡಿತ್ತು.
ಈಗ ಸರಣಿ ಗೆಲ್ಲಲು ಕೊನೆಯ ಎರಡು ಪಂದ್ಯಗಳಲ್ಲೂ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಅತ್ತ ವಿಂಡೀಸ್ ತಂಡವನ್ನು ಜೇಸನ್ ಹೋಲ್ಡರ್, ಶಾಯ್ ಹೋಪ್ ಮತ್ತು ಒಡಿಯನ್ ಸ್ಮಿತ್ ಸೇರಿಕೊಂಡಿದ್ದಾರೆ.
ಭಾರತ ತಂಡ ಇಂತಿದೆ:
ಶುಭಮನ್ ಗಿಲ್,
ಯಶಸ್ವಿ ಜೈಸ್ವಾಲ್,
ಸೂರ್ಯಕುಮಾರ್ ಯಾದವ್ (ಉಪನಾಯಕ),
ತಿಲಕ್ ವರ್ಮಾ,
ಹಾರ್ದಿಕ್ ಪಾಂಡ್ಯ (ನಾಯಕ),
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್),
ಅಕ್ಷರ್ ಪಟೇಲ್,
ಅರ್ಷದೀಪ್ ಸಿಂಗ್,
ಕುಲದೀಪ್ ಯಾದವ್,
ಯಜುವೇಂದ್ರ ಚಾಹಲ್,
ಮುಕೇಶ್ ಕುಮಾರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.