ADVERTISEMENT

IND vs ZIM 1st ODI: ಭಾರತಕ್ಕೆ 190 ರನ್ ಗುರಿ ನೀಡಿದ ಜಿಂಬಾಬ್ವೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 12:05 IST
Last Updated 18 ಆಗಸ್ಟ್ 2022, 12:05 IST
ಐಎಎನ್‌ಎಸ್ ಚಿತ್ರ
ಐಎಎನ್‌ಎಸ್ ಚಿತ್ರ   

ಹರಾರೆ: ಇಲ್ಲಿ ನಡೆಯುತ್ತಿರುವ ಮೊದಲ ಏಕದಿನ ಕ್ರಿಕೆಟ್ಪಂದ್ಯದಲ್ಲಿ ಜಿಂಬಾಬ್ವೆ, ಭಾರತಕ್ಕೆ 190 ರನ್‌ಗಳ ಗುರಿ ನೀಡಿದೆ..

ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಜಿಂಬಾಬ್ವೆ 40.3 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 189 ರನ್ ಗಳಿಸಿತು.

ರೆಗಿಸ್ ಚಕಬ್ವಾ 35, ರಿಚರ್ಡ್ ಗರವಾ 34 ಮತ್ತು ಬ್ರಾಡ್ ಎವನ್ಸ್ 33 ರನ್ ಗಳಿಸಿದರು.

ADVERTISEMENT

ಭಾರತದ ಪರ ದೀಪಕ್ ಚಾಹರ್, ಪ್ರಸಿದ್ಧ ಕೃಷ್ಣ ಮತ್ತು ಅಕ್ಷರ್ ಪಟೇಲ್ ತಲಾ 3 ವಿಕೆಟ್ ಉರುಳಿಸಿದರು.

ಭಾರತೀಯ ಬೌಲರ್‌ಗಳ ಬೌಲಿಂಗ್ ದಾಳಿಗೆ ತತ್ತರಿಸಿದ ಜಿಂಬಾಬ್ವೆ ತಂಡ ಅಲ್ಪ ಮೊತ್ತಕ್ಕೆ ಕುಸಿಯಿತು.

ಭಾರತ ಬ್ಯಾಟಿಂಗ್ ಆರಂಭಿಸಿದ್ದು,ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.