ಹರಾರೆ: ಆತಿಥೇಯ ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಗಾಯದಿಂದ ಚೇತರಿಸಿಕೊಂಡ ಬಳಿಕ ಕನ್ನಡಿಗ ರಾಹುಲ್, ನಾಯಕರಾಗಿ ಕಣಕ್ಕಿಳಿದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತದ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಉತ್ತಮ ಅವಕಾಶ ದೊರಕಲಿದೆ.
ಆಡುವ ಬಳಗದಲ್ಲಿ ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಎಲ್ಲ ಮೂರು ಪಂದ್ಯಗಳು ಹರಾರೆಯ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ಕೊನೆಯ ಎರಡು ಪಂದ್ಯಗಳೂ ಕ್ರಮವಾಗಿ ಆಗಸ್ಟ್ 20 ಹಾಗೂ 22ರಂದು ಭಾರತೀಯ ಕಾಲಮಾನ ಅಪರಾಹ್ನ 12.45ಕ್ಕೆ ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.