
ಪ್ರಜಾವಾಣಿ ವಾರ್ತೆ
ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ ಸರಣಿಯ ಸೂಪರ್ 12ರ ಎರಡನೇ ಗುಂಪಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿರುವ ಭಾರತ, ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟದೊಂದಿಗೆ 186 ರನ್ ಗಳಿಸಿದೆ.
ಮೆಲ್ಬರ್ನ್ ಕ್ರಿಕೆಟ್ ಅಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರಾದ ಕೆ.ಎಲ್ ರಾಹುಲ್ 51 (35), 61 (25) ರನ್ ಗಳಿಸಿ ಮಿಂಚಿದರು. 26 ರನ್ ಗಳಿಸಿದ ವಿರಾಟ್ ಕೊಹ್ಲಿ ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು.
ಜಿಂಬಾಬ್ವೆ ಪರ ಸೀನ್ ವಿಲಿಯಮ್ಸ್ ಎರಡು ವಿಕೆಟ್ ಗಳಿಸಿದರೆ, ಬ್ಲೆಸಿಂಗ್ ಮುಜರಬಾನಿ, ರಿಚರ್ಡ್ ನರಾವ ತಲಾ ಒಂದೊಂದು ವಿಕೆಟ್ ಗಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.