IND–W
ರಾಜಕೋಟ್: ಹಿಂದಿನ ಎರಡು ಪಂದ್ಯಗಳಲ್ಲಿ ಅಧಿಕಾರಯುತ ಗೆಲುವು ಸಾಧಿಸಿರುವ ಭಾರತ ತಂಡವು ಬುಧವಾರ ಐರ್ಲೆಂಡ್ ವಿರುದ್ಧ ಇಲ್ಲಿ ನಡೆದ ಮಹಿಳೆಯರ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯವನ್ನೂ ಗೆದ್ದು ಕ್ಲೀನ್‌ಸ್ವೀಪ್ ಮಾಡಿತು.
ಇಲ್ಲಿನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ 304 ರನ್‌ಗಳ ಭರ್ಜರಿ ಜಯ ಸಾಧಿಸಿತು.
ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಏಕದಿನ ಕ್ರಿಕೆಟ್‌ನಲ್ಲಿ ಭಾರತ ಅತ್ಯಧಿಕ ರನ್ ದಾಖಲಿಸಿದ ಶ್ರೇಯಕ್ಕೆ ಪಾತ್ರವಾಯಿತು. ಇದೇ ಪಂದ್ಯ ಭಾರತದ ಇಬ್ಬರು ಬ್ಯಾಟರ್‌ಗಳು ಶತಕ ಸಿಡಿಸಿ ದಾಖಲೆ ಬರೆದರು.
ಪ್ರತಿಕಾ ರಾವಲ್ 154 ರನ್ ಬಾರಿಸಿದರೆ, ನಾಯಕಿ ಸ್ಮೃತಿ ಮಂದಾನಾ 70 ಬಾಲ್‌ಗಳಲ್ಲಿ ಶತಕ ಸಿಡಿಸಿದ ದಾಖಲೆ ಬರೆದರು. ಮಂದಾನಾ 135 ರನ್ ಬಾರಿಸಿದರು. ವಿಕೆಟ್ ಕೀಪರ್ ರಿಚಾ ಘೋಷ್ 59 ರನ್ ಸಿಡಿಸಿ ಗಮನ ಸೆಳೆದರು. ಐರ್ಲೆಂಡ್‌ನ ವೇಗದ ಬೌಲರ್ ಓರ್ಲಾ ಎರಡು ವಿಕೆಟ್ ಕಬಳಿಸಿದರು.
ಬೃಹತ್ ಬೆನ್ನಿತ್ತಿದ ಐರ್ಲೆಂಡ್ 31.4 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 131 ರನ್‌ಗಳಿಸಿ ಸೋಲುಂಡಿತು. ಸರಾಹ 41, ಓರ್ಲಾ 36 ರನ್‌ಗಳಿಸಿದರು. ಉಳಿದ ಬ್ಯಾಟರ್‌ಗಳು ಭಾರತದ ವನಿತೆಯರ ಬೌಲಿಂಗ್ ದಾಳಿಗೆ ಥಂಡ ಹೊಡೆದರು.
ಈ ಸರಣಿಯಲ್ಲಿ ಭಾರತ ಎಲ್ಲ ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿತು.
ಸ್ಕೋರ್...
IND–W: 435/5 (50)
IRE–W: 131 (31.4)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.