ADVERTISEMENT

ಗೆಳತಿ ಅಂಜುಮ್ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿವಂ ದುಬೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜುಲೈ 2021, 4:14 IST
Last Updated 17 ಜುಲೈ 2021, 4:14 IST
ಶಿವಂ ದುಬೆ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್
ಶಿವಂ ದುಬೆ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್   

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಶಿವಂ ದುಬೆ ಶುಕ್ರವಾರ ಗೆಳತಿ ಅಂಜುಮ್ ಖಾನ್ ಅವರನ್ನು ವಿವಾಹವಾದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವ ದುಬೆ, ತಮ್ಮ ವಿವಾಹ ಸಮಾರಂಭದ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

‘ನಾವು ಪ್ರೀತಿಗಿಂತ ಹೆಚ್ಚಿನ ಪ್ರೀತಿಯಿಂದ ಪ್ರೀತಿಸಿದ್ದೇವೆ’ ಎಂದು ಅವರು ತಮ್ಮ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ‘ಈಗ ನಮ್ಮ ಶಾಶ್ವತ ಜೀವನ ಪ್ರಾರಂಭವಾಗುವ ಸ್ಥಳ ಇದು.’ಎಂದು ಬರೆದುಕೊಂಡಿದ್ದಾರೆ.

ಸಹ ಕ್ರಿಕೆಟಿಗರಾದ ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್ ಮತ್ತು ಪ್ರಿಯಾಂಕ್ ಪಾಂಚಲ್ ಅವರು ದುಬೆಗೆ ಶುಭಾಶಯ ತಿಳಿಸಿದ್ದಾರೆ.

ADVERTISEMENT

ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಟ್ವಿಟ್ಟರ್‌ನಲ್ಲಿ ನವವಿವಾಹಿತರನ್ನು ಅಭಿನಂದಿಸಿದೆ.

ಟೀಮ್ ಇಂಡಿಯಾದ ಎಡಗೈ ಬ್ಯಾಟ್ಸ್‌ಮನ್ ಮತ್ತು ಬಲಗೈ ಮಧ್ಯಮ ವೇಗಿ ದುಬೆ ಅವರು 2019 ರ ನವೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಟಿ 20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಡುವ ಮೂಲಕ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಭಾರತದ ಪರ ಅವರು 13 ಟಿ 20 ಪಂದ್ಯಗಳನ್ನು ಆಡಿದ್ದು, ಒಂದು ಅರ್ಧಶತಕ ಸಿಡಿಸಿದ್ದಾರೆ. 30 ರನ್ ನೀಡಿ 3 ವಿಕೆಟ್ ಉರುಳಿಸಿದ್ದುಟಿ20ಯಲ್ಲಿ ಅವರ ಅತ್ಯುತ್ತಮ ಬೌಲಿಂಗ್ ದಾಖಲೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.