ADVERTISEMENT

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ತಂಡ ಪ್ರಕಟ: ಶಿಖರ್‌ ಧವನ್‌ಗೆ ನಾಯಕತ್ವ

ಐಎಎನ್ಎಸ್
Published 31 ಜುಲೈ 2022, 8:43 IST
Last Updated 31 ಜುಲೈ 2022, 8:43 IST
ರಾಹುಲ್‌ ದ್ರಾವಿಡ್‌ ಮತ್ತು  ಶಿಖರ್‌ ಧವನ್‌
ರಾಹುಲ್‌ ದ್ರಾವಿಡ್‌ ಮತ್ತು ಶಿಖರ್‌ ಧವನ್‌    

ನವದೆಹಲಿ: ಮುಂದಿನ ತಿಂಗಳು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್‌ ಸರಣಿಗೆ ಬಿಸಿಸಿಐ ಶನಿವಾರ ತಂಡ ಪ್ರಕಟಿಸಿದೆ. ಶಿಖರ್‌ ಧವನ್‌ಗೆ ನಾಯಕತ್ವವನ್ನು ವಹಿಸಲಾಗಿದೆ.

ಹಲವು ಕಾರಣಗಳಿಂದಾಗಿ ಈ ಸರಣಿಯಿಂದ ಕೆ.ಎಲ್‌ ರಾಹುಲ್‌ ಅವರನ್ನು ಕೈಬಿಡಲಾಗಿದೆ. ಈ ಬೆಳವಣಿಗೆಯು ಟಿ20 ವಿಶ್ವಕಪ್‌ನಲ್ಲಿ ಆಡುವ ಅವರ ಅವಕಾಶಗಳಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತೊಂದುಕಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ರಿಷಭ್‌ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಇತರ ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ADVERTISEMENT

ಆಗಸ್ಟ್ 18, 20 ಮತ್ತು 22 ರಂದು ಜಿಂಬಾಬ್ವೆಯಲ್ಲಿ ಭಾರತ 3 ಏಕದಿನ ಪಂದ್ಯಗಳನ್ನು ಆಡಲಿದೆ. ಹರಾರೆಯಲ್ಲಿ ಮೊದಲ ಪಂದ್ಯ ನಡೆಯಲಿದೆ.

ತಂಡ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಪಟೇಲ್, ಅವೆಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.