ADVERTISEMENT

ಟಿ–20 ವಿಶ್ವಕಪ್‌ಗೆ ಭಾರತ ಕ್ರಿಕೆಟ್ ತಂಡ ಪ್ರಕಟ: ಬೂಮ್ರಾ, ಹರ್ಷಲ್‌ಗೆ ಸ್ಥಾನ

ಪಿಟಿಐ
Published 12 ಸೆಪ್ಟೆಂಬರ್ 2022, 14:52 IST
Last Updated 12 ಸೆಪ್ಟೆಂಬರ್ 2022, 14:52 IST
   

ನವದಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೇಗಿಗಳಾದ ಜಸ್‌ಪ್ರೀತ್‌ ಬೂಮ್ರಾ ಮತ್ತು ಹರ್ಷಲ್ ಪಟೇಲ್ ತಂಡಕ್ಕೆ ವಾಪಸ್ ಆಗಿದ್ದು, ಬೌಲಿಂಗ್ ಬಲವನ್ನು ಹೆಚ್ಚಿಸಿದೆ.

ಅಸಾಂಪ್ರದಾಯಿಕ ಬೌಲಿಂಗ್ ಶೈಲಿ ಮತ್ತು ಅದ್ಬುತ ಯಾರ್ಕರ್ ಮೂಲಕ ಗಮನ ಸೆಳೆದಿರುವ ಬೂಮ್ರಾ, ಚುಟುಕು ಕ್ರಿಕೆಟ್‌ನಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ.

ಪಕ್ಕೆಲುಬು ಗಾಯದಿಂದ ಚೇತರಿಸಿಕೊಂಡಿರುವ ಹರ್ಷಲ್ ಪಟೇಲ್ ಸಹ 15 ಸದಸ್ಯರ ಭಾರತ ತಂಡ ಸೇರಿಸದ್ದು, ಅನುಭವಿ ಭುವನೇಶ್ವರ್ ಕುಮಾರ್ ಜೊತೆ ಭಾರತದ ಅಂತಿಮ ಓವರ್‌ಗಳ ಬೌಲಿಂಗ್ ಆಯ್ಕೆಯನ್ನು ಹೆಚ್ಚಿಸಿದೆ.

ADVERTISEMENT

ಅಕ್ಟೋಬರ್ 23ರಂದು ಮೆಲ್ಬರ್ನ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುವ ಮೂಲಕ ಭಾರತ ತಂಡ ತನ್ನ ಟಿ–20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಯುಎಇಯಲ್ಲಿ ನಡೆದ ಏಷ್ಯಾಕಪ್ ಟಿ–20 ಕ್ರಿಕೆಟ್ ಸರಣಿಯ ಫೈನಲ್ ಪ್ರವೇಶಿಸುವಲ್ಲಿ ವಿಫಲವಾದ ಭಾರತ ತಂಡ, ಸೆ.20ರಿಂದ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗೆ ಆತಿಥ್ಯ ವಹಿಸಲಿದೆ.

ಆಸ್ಟ್ರೇಲಿಯಾಗೆ ತೆರಳುವ ಮೊದಲು ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆರು ಟಿ–20 ಪಂದ್ಯಗಳನ್ನು ಭಾರತ ಆಡಲಿದೆ. ಈ ಎರಡೂ ಸರಣಿಗೂ ತಂಡ ಘೊಷಿಸಲಾಗಿದೆ.

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್‌ದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು - ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ದೀಪಕ್ ಚಾಹರ್

ಆಸ್ಟ್ರೇಲಿಯಾ ವಿರುದ್ಧದ ಟಿ–20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್‌ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ–20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್‌ಪ್ರೀತ್ ಬುಮ್ರಾ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.