

ಅಹಮದಾಬಾದ್: ಇಲ್ಲಿನ ನರೇಂಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು ನೆದರ್ಲೆಂಡ್ಸ್ ವಿರುದ್ಧ ಗೆಲುವು ಸಾಧಿಸಿದೆ.
ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳ ನಡುವೆ ಸಿ ಗುಂಪಿನ ಕೊನೆಯ ಲೀಗ್ ಪಂದ್ಯ ನಡೆದಿದೆ.
ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 6 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ನೆದರ್ಲೆಂಡ್ಸ್ ತಂಡ 7 ವಿಕೆಟ್ ನಷ್ಟಕ್ಕೆ 176 ರನ್ ಮಾತ್ರವೇ ಕಲೆ ಹಾಕಿದೆ. ಈ ಮೂಲಕ ಪಂದ್ಯ ಕೈಚೆಲ್ಲಿದೆ.
ಟಿ20 ವಿಶ್ವಕಪ್ 2026 ಆರಂಭಕ್ಕೆ ಮೊದಲು ಉತ್ತಮ ಲಯದಲ್ಲಿದ್ದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಸಿಕ್ಕಾಪಟ್ಟೆ ಸದ್ದು ಮಾಡಿದ್ದರು. ಆದರೆ, ಟೂರ್ನಿಯುದ್ದಕ್ಕೂ ನೀರಸ ಪ್ರದರ್ಶನ ನೀಡಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.