ADVERTISEMENT

PHOTOS | ನ್ಯೂಜಿಲೆಂಡ್ ವಿರುದ್ಧ ಭಾರತ ಸರಣಿ ಗೆಲುವಿನ ಝಲಕ್!

ಮುಂಬೈ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ 372 ರನ್ ಅಂತರದ ಬೃಹತ್ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಮೂಲಕ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮಗದೊಮ್ಮೆ ಅಗ್ರಸ್ಥಾನಕ್ಕೇರಿದೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಯಾವುದೇ ತಂಡದ ವಿರುದ್ಧ ಭಾರತ ಗಳಿಸಿದ ಅತಿ ದೊಡ್ಡ (ರನ್ ಅಂತರದಲ್ಲಿ) ಗೆಲುವಾಗಿದೆ.

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 9:12 IST
Last Updated 6 ಡಿಸೆಂಬರ್ 2021, 9:12 IST
ಶ್ರೇಯಸ್ ಅಯ್ಯರ್‌ಗೆ ಟ್ರೋಫಿ ಹಸ್ತಾಂತರಿಸಿದ ನಾಯಕ ವಿರಾಟ್ ಕೊಹ್ಲಿ
ಶ್ರೇಯಸ್ ಅಯ್ಯರ್‌ಗೆ ಟ್ರೋಫಿ ಹಸ್ತಾಂತರಿಸಿದ ನಾಯಕ ವಿರಾಟ್ ಕೊಹ್ಲಿ   
ಇನ್ನಿಂಗ್ಸ್‌ವೊಂದರಲ್ಲಿ 10 ವಿಕೆಟ್ ಗಳಿಸಿದ ಎಜಾಜ್ ಪಟೇಲ್ ಹೋರಾಟ ವ್ಯರ್ಥ
ಸರಣಿಶ್ರೇಷ್ಠ ಪುರಸ್ಕೃತ ಆರ್. ಅಶ್ವಿನ್
ಮೊದಲ ಅಭಿಯಾನದಲ್ಲೇ ಕೋಚ್ ರಾಹುಲ್ ದ್ರಾವಿಡ್‌ಗೆ ಗೆಲುವು
ಕೋಚ್ ದ್ರಾವಿಡ್ ಜೊತೆಗೆ ನಾಯಕ ಕೊಹ್ಲಿ ಸಮಾಲೋಚನೆ
ಮುಂಬೈ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ 372 ರನ್ ಅಂತರದ ಗೆಲುವು
ದ್ವಿತೀಯ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಕಬಳಿಸಿದ ಜಯಂತ್ ಯಾದವ್
ಮಯಂಕ್ ಅಗರವಾಲ್ ಆಕರ್ಷಕ ಶತಕ ಸಾಧನೆ
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ದೊಡ್ಡ (ರನ್ ಅಂತರದಲ್ಲಿ) ಗೆಲುವು ದಾಖಲಿಸಿದ ಟೀಮ್ ಇಂಡಿಯಾ
ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.