ADVERTISEMENT

T20 World Cup: ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್ ತಲುಪಿದ ಭಾರತ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 17:34 IST
Last Updated 1 ಮಾರ್ಚ್ 2026, 17:34 IST
<div class="paragraphs"><p>ಸಂಜು ಸ್ಯಾಮ್ಸನ್‌</p></div>

ಸಂಜು ಸ್ಯಾಮ್ಸನ್‌

   

ಕೃಪೆ: ಪಿಟಿಐ

ಕೋಲ್ಕತ್ತ: ವೆಸ್ಟ್ ಇಂಡೀಸ್‌ ವಿರುದ್ಧದ ನಿರ್ಣಾಯಕ ಹೋರಾಟದಲ್ಲಿ ಗೆದ್ದ ಭಾರತ ತಂಡವು, 2026ರ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು.

ADVERTISEMENT

ಕೋಲ್ಕತ್ತದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ವಿಂಡೀಸ್, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 194 ರನ್‌ ಗಳಿಸಿತ್ತು. ಈ ಗುರಿಯನ್ನು ಭಾರತ, ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಂತೆಯೇ ತಲುಪಿ ಜಯದ ನಗೆ ಬೀರಿತು.

ಟೀಂ ಇಂಡಿಯಾ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ಸಂಜು ಸ್ಯಾಮ್ಸನ್‌, 50 ಎಸೆತಗಳಲ್ಲಿ 90 ರನ್‌ ಗಳಿಸಿ ಅಜೇಯವಾಗಿ ಉಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.