ರೋಹಿತ್ ಶರ್ಮಾ
–ಪಿಟಿಐ ಚಿತ್ರ
ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಯುವ ಓಪನರ್ ಯಶಸ್ವಿ ಜೈಸ್ವಾಲ್ ಅವರನ್ನು ಮುಂಬೈ ರಣಜಿ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ಇದೇ 23ರಿಂದ ಎಂಸಿಎ–ಬಿಕೆಸಿ ಮೈದಾನದಲ್ಲಿ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಮುಂದಿನ ಪಂದ್ಯದಲ್ಲಿ ಆಡಲಿರುವ ಮುಂಬೈ ತಂಡಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.
ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.
ಶನಿವಾರದಿಂದ ಆರಂಭವಾಗಲಿರುವ ರಣಜಿ ಪಂದ್ಯದಲ್ಲಿ ಆಡುವುದನ್ನು ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿ, ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿ ರೋಹಿತ್ ಫಾರ್ಮ್ ಬಗ್ಗೆ ಪ್ರಶ್ನೆ ಎದ್ದಿದೆ.
ಒಪ್ಪಂದಕ್ಕೆ ಒಳಪಟ್ಟಿರುವ ಎಲ್ಲ ಆಟಗಾರರು ದೇಶೀಯ ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಇತ್ತೀಚೆಗೆ ಸೂಚಿಸಿತ್ತು.
ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರೋಹಿತ್ ಶರ್ಮಾ, ರಣಜಿ ಪಂದ್ಯದಲ್ಲಿ ಆಡುವ ಇಂಗಿತವನ್ನು ಇತ್ತೀಚೆಗೆ ವ್ಯಕ್ತಪಡಿಸಿದ್ದರು. ಕೋಚ್ ಜೊತೆಗೂ ಮಾತುಕತೆ ನಡೆಸಿದ್ದರು.
ಮುಂಬೈ ರಣಜಿ ತಂಡ ಇಂತಿದೆ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಆಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರ್ದಿಕ್ ತಮೋರ್, ಆಕಾಶ್ ಆನಂದ್, ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶು ಸಿಂಗ್, ಶಾರ್ದೂಲ್ ಠಾಕೂರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.