ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಮೈಕೆಲ್ ಕ್ಲಿಂಗರ್
ಚಿತ್ರ ಕೃಪೆ: ಪಿಟಿಐ
ವಡೋದರಾ: ಫೆಬ್ರುವರಿ 7ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ಗಳನ್ನು ಸೋಲಿಸುವುದು ಸುಲಭವಲ್ಲ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಹಾಗೂ ಗುಜರಾತ್ ಜೈಂಟ್ಸ್ ತಂಡದ ಕೋಚ್ ಮೈಕೆಲ್ ಕ್ಲಿಂಗರ್ ಹೇಳಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮುಖ್ಯ ಕೋಚ್ ಆಗಿರುವ ಮೈಕೆಲ್ ಕ್ಲಿಂಗರ್ ಭಾರತ ತಂಡದ ಬಗ್ಗೆ ಮಾತನಾಡಿದ್ದಾರೆ. ‘ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟಿಂಗ್ ಆಕ್ರಮಣಕಾರಿಯಾಗಿರುವುದರಿಂದ ಐಸಿಸಿ ಪಂದ್ಯಾವಳಿಗೆ ಪ್ರವೇಶಿಸಿರುವ ಬಲಿಷ್ಠ ತಂಡವನ್ನಾಗಿಸಿದೆ’ ಎಂದು ಹೇಳಿದ್ದಾರೆ.
‘ಇತ್ತೀಚಿಗೆ ಭಾರತ ಮತ್ತು ನ್ಯೂಜಿಲೆಂಡ್ ಸರಣಿಯಲ್ಲಿ ಭಾರತ ತಂಡದ ಆಕ್ರಮಣಕಾರಿ ಆಟ ನೋಡಿದರೆ, ಭಾರತವನ್ನು ಸುಲಭವಾಗಿ ಜಯಿಸುವುದು ವಿಶ್ವದ ಯಾವುದೇ ತಂಡಕ್ಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
’ಅಭಿಷೇಕ್ ಶರ್ಮಾ ನನ್ನ ನೆಚ್ಚಿನ ಆಟಗಾರನಾಗಿದ್ದಾನೆ. ಐಪಿಎಲ್‌ನಲ್ಲಿ ಟ್ರಾವಿಸ್ ಹೆಡ್ ಜೊತೆ ಓಪನ್ ಮಾಡುತ್ತಿದ್ದರು. ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಂದ್ಯವನ್ನು ಓಪನ್ ಮಾಡುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಆಟವಾಡುತ್ತಾರೆ’ ಎಂದು ಹೇಳಿದ್ದಾರೆ.
’ಅಭಿಷೇಕ್ ಮತ್ತು ಇಶಾನ್ ಕಿಶನ್ ಇಬ್ಬರೂ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆದಾಗ್ಯೂ, ಭಾರತ ತಂಡ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆ ಎದುರಿಸಬೇಕಾಗುತ್ತದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಬಲಿಷ್ಠವಾಗಿವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.