ADVERTISEMENT

ಡಬ್ಲ್ಯುಟಿಸಿ: ಪಾಯಿಂಟ್ಸ್‌ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಕೆಳಗೆ ಕುಸಿದ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2022, 3:12 IST
Last Updated 6 ಜುಲೈ 2022, 3:12 IST
ಭಾರತ ಕ್ರಿಕೆಟ್‌ ತಂಡದ ಆಟಗಾರರು –ಪಿಟಿಐ ಚಿತ್ರ
ಭಾರತ ಕ್ರಿಕೆಟ್‌ ತಂಡದ ಆಟಗಾರರು –ಪಿಟಿಐ ಚಿತ್ರ   

ನವದೆಹಲಿ: ಎಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ (ಐದನೇ) ಟೆಸ್ಟ್‌ ಪಂದ್ಯದಲ್ಲಿ ನಿಧಾನಗತಿಯ ಓವರ್‌ರೇಟ್‌ಗಾಗಿ ದಂಡ ವಿಧಿಸಲ್ಪಟ್ಟ ನಂತರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದೆ.

ಪಂದ್ಯದಲ್ಲಿ ನಿಗದಿಯ ವೇಳೆಗೆ ಓವರ್‌ಗಳನ್ನು ಪೂರೈಸದ ಕಾರಣಕ್ಕೆ ಭಾರತ ತಂಡಕ್ಕೆ ಪಂದ್ಯ ಶುಲ್ಕದ ಶೇ 40ರಷ್ಟು ದಂಡ ವಿಧಿಸಲಾಗಿದೆ. ಜತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಅಂಕಗಳನ್ನು ಕಡಿತಗೊಳಿಸುವ ಮೂಲಕದಂಡ ವಿಧಿಸಿತು.

ಇದರೊಂದಿಗೆ ಡಬ್ಲ್ಯುಟಿಸಿ ಪಟ್ಟಿಯಲ್ಲಿ ಭಾರತ ತಂಡವುನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿತು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಏರಿತು.

ADVERTISEMENT

ದಂಡ ವಿಧಿಸಿದ ನಂತರ, ಭಾರತ 52.08 ಪಾಯಿಂಟ್ಸ್‌ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 52.38 ಪಾಯಿಂಟ್ಸ್‌ಗಳೊಂದಿಗೆ ಮೂರನೇ ಸ್ಥಾನಕ್ಕೇರಿದೆ.

2007ರ ನಂತರ ಇಂಗ್ಲೆಂಡ್‌ನಲ್ಲಿ ತಮ್ಮ ಮೊದಲ ಟೆಸ್ಟ್ ಸರಣಿಯನ್ನು ಗೆಲ್ಲುವ ಅವಕಾಶವನ್ನು ಭಾರತವು ಕಳೆದುಕೊಂಡಿತು.

ಜೋ ರೂಟ್‌ ಮತ್ತು ಜಾನಿ ಬೆಸ್ಟೋ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಇಂಗ್ಲೆಂಡ್‌ ತಂಡ, ಭಾರತದ ವಿರುದ್ಧ 7 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.

ಈ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಉಭಯ ತಂಡಗಳು 2–2ರಲ್ಲಿ ಸಮಬಲ ಸಾಧಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.