ಅನ್ಶುಲ್ ಕಾಂಬೋಜ್
ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ 4ನೇ ಮತ್ತು 5ನೇ ಟೆಸ್ಟ್ ಪಂದ್ಯಕ್ಕೆ ಹರಿಯಾಣದ ವೇಗಿ ಅನ್ಶುಲ್ ಕಾಂಬೋಜ್ ಆಯ್ಕೆಯಾಗಿದ್ದಾರೆ.
ಅನ್ಶುಲ್ ಕಾಂಬೋಜ್ ಅವರು ಭಾರತ ತಂಡವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅನ್ಶುಲ್ ಕಾಂಬೋಜ್ ಭಾರತ ತಂಡಕ್ಕೆ ಆಯ್ಕೆಯಾಗಿರುವುದನ್ನು ಬಿಸಿಸಿಐ ಖಚಿತಪಡಿಸಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಅರ್ಷದೀಪ್ ಗಾಯಗೊಂಡಿರುವುದರಿಂದ ಉಳಿದ ಪಂದ್ಯಗಳಿಗೆ ಅನ್ಶುಲ್ ಕಾಂಬೋಜ್ ಆಯ್ಕೆಯಾಗಿದ್ದಾರೆ.
5 ಪಂದ್ಯಗಳ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿವೆ. ಜುಲೈ 23ರಿಂದ 4ನೇ ಪಂದ್ಯ ನಡೆಯಲಿದೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಅನ್ಶುಲ್ ಕಾಂಬೋಜ್ ಆಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.