ADVERTISEMENT

ಎರಡನೇ ಪಂದ್ಯದಲ್ಲೂ ಟಾಸ್ ಸೋತ ಭಾರತ:ಕೊನೆಯ ಬಾರಿ ಟಾಸ್ ಗೆದ್ದಿದ್ದು ಆ ಪಂದ್ಯದಲ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಡಿಸೆಂಬರ್ 2025, 9:31 IST
Last Updated 3 ಡಿಸೆಂಬರ್ 2025, 9:31 IST
   

ರಾಯಪುರ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ತಂಡ ಟಾಸ್‌ ಸೋತಿದೆ.

ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು ಟಾಸ್‌ ಸೋಲುವ ಮೂಲಕ ಅಂತರರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಸತತ 20 ಬಾರಿ ಟಾಸ್‌ ಸೋತಂತಾಗಿದೆ.

ADVERTISEMENT

ಟೀಮ್‌ ಇಂಡಿಯಾವು ಕೊನೆಯ ಬಾರಿಗೆ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟಾಸ್‌ ಜಯಿಸಿತ್ತು.

ಅಹಮದಾಬಾದ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ ನಂತರ ಇದುವರೆಗೆ 20 ಪಂದ್ಯಗಳನ್ನು ಆಡಿದ್ದು, ಒಂದು ಬಾರಿಯೂ ಕೂಡ ಟಾಸ್‌ ಗೆದ್ದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.