ADVERTISEMENT

ಐಸಿಸಿ ಏಕದಿನ ಕ್ರಿಕೆಟ್ ತಂಡ ರ್‍ಯಾಂಕಿಂಗ್‌ನಲ್ಲಿ 3ನೇ ಸ್ಥಾನಕ್ಕೆ ಜಿಗಿದ ಭಾರತ

ಪಿಟಿಐ
Published 28 ಜುಲೈ 2022, 6:26 IST
Last Updated 28 ಜುಲೈ 2022, 6:26 IST
   

ದುಬೈ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು 3–0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ ಭಾರತ ತಂಡ, ಐಸಿಸಿ ಏಕದಿನ ಕ್ರಿಕೆಟ್ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ.

ಪ್ರಮುಖ ಆಟಗಾರರ ಅನುಪಸ್ಥಿತಿ ನಡುವೆಯೂ ಶಿಖರ್ ಧವನ್ ನೇತೃತ್ವದ ತಂಡವು ಬುಧವಾರ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದಡಿಯಲ್ಲಿ 119 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು.

ಈ ಮೂಲಕ ಟೀಮ್ ಇಂಡಿಯಾ 110 ಅಂಕಗಳೊದಿಗೆ ಮೂರನೇ ಸ್ಥಾನಕ್ಕೆ ಜಿಗಿದಿದ್ದು, ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡ (106) ನಾಲ್ಕನೇ ಸ್ಥಾನಕ್ಕೆ ಇಳಿದಿದೆ.

ADVERTISEMENT

ದಕ್ಷಿಣ ಆಫ್ರಿಕಾ ವಿರುದ್ಧ ತವರಿನ ಸರಣಿ ಸೇರಿ ಈವರೆಗೆ ಭಾರತ ತಂಡ ಈ ವರ್ಷ ಆಡಿರುವ 9 ಏಕದಿನ ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿದೆ.

ಇನ್ನು, 128 ಅಂಕಗಳೊಂದಿಗೆ ನ್ಯೂಜಿಲೆಂಡ್ ಅಗ್ರ ಸ್ಥಾನ ಕಾಯ್ದುಕೊಂಡಿದ್ದರೆ, ಇಂಗ್ಲೆಂಡ್ (119) ಎರಡನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.