
ವಿಶಾಖಪಟ್ಟಣ: ನ್ಯೂಜಿಲೆಂಡ್ ವಿರುದ್ಧದ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತದ ಬೌಲರ್‌ಗಳು ದುಬಾರಿಯಾದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು. ಭಾರತಕ್ಕೆ 216 ರನ್ ಗುರಿ ನೀಡಲಾಗಿದೆ.
ನ್ಯೂಜಿಲೆಂಡ್ ಪರ ಆರಂಭಿಕ ಆಟಗಾರರರಾದ ಡೆವೊನ್ ಕಾನ್ವೇ ( 44 ರನ್) ಹಾಗೂ ಟಿಮ್ ಸೀಫರ್ಟ್ ( 62 ರನ್) ಸ್ಪೋಟಕ ಆಟವಾಡಿದರು. ಮೊದಲ ವಿಕೆಟ್‌ಗೆ 100 ರನ್ ಜೊತೆಯಾಟವಾಡಿದರು.
ಕುಲದೀಪ್ ಯಾದವ್ ಅವರು ಡೆವೊನ್ ಕಾನ್ವೇ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಮೇಲುಗೈ ತಂದರು. ಕಿವೀಸ್‌ನ ಮಧ್ಯಮ ಕ್ರಮಾಂಕದ ಆಟಗಾರರು ಹೆಚ್ಚು ರನ್ ಗಳಿಸುವಲ್ಲಿ ವಿಫಲರಾದರು.
ಡೆತ್ ಓವರ್‌ನಲ್ಲಿ ಮಿಂಚಿದ ಡೇರಿಲ್ ಮಿಚೆಲ್ 18 ಎಸೆತಗಳಲ್ಲಿ 39 ರನ್‌ಗಳಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಭಾರತದ ಪರ ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್ ತಲಾ 2 ವಿಕೆಟ್ ಹಾಗೂ ಬೂಮ್ರಾ ಮತ್ತು ಬಿಷ್ಣೋಯಿ ತಲಾ 1 ವಿಕೆಟ್ ಕಬಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.