ನ್ಯೂಜಿಲೆಂಡ್ ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕರುಗಳು
ಚಿತ್ರ ಕೃಪೆ: @ESPNcricinfo
ರಾಜಕೋಟ್: ಇಲ್ಲಿ ನಡೆಯಲಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ 1–0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ಮೊದಲ ಪಂದ್ಯ ಸೋತಿರುವ ನ್ಯೂಜಿಲೆಂಡ್ ತಂಡ, ಆದಿತ್ಯ ಅಶೋಕ್ ಬದಲು ಜೇಡನ್ ಲೆನಾಕ್ಸ್ ಅವರಿಗೆ ಆಡುವ 11ರ ಬಳಗದಲ್ಲಿ ಅವಕಾಶ ನೀಡಿದೆ.
ಭಾರತ ತಂಡದಲ್ಲಿ ಕೂಡ ಒಂದು ಬದಲಾವಣೆ ಮಾಡಲಾಗಿದೆ. ಗಾಯಗೊಂಡು ಸರಣಿಯಿಂದ ಹೊರಬಿದ್ದಿರುವ ವಾಷಿಂಗ್ಟನ್ ಸುಂದರ್ ಬದಲು ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಅವಕಾಶ ನೀಡಲಾಗಿದೆ.
ಉಭಯ ತಂಡಗಳು
ನ್ಯೂಜಿಲೆಂಡ್ ಆಡುವ 11ರ ಬಳಗ: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿಕೆಟ್ ಕೀಪರ್) ಮೈಕೆಲ್ ಬ್ರೇಸ್‌ವೆಲ್ (ನಾಯಕ), ಜಕಾರಿ ಫೌಲ್ಕ್ಸ್, ಜೇಡೆನ್ ಲೆನಾಕ್ಸ್, ಕೈಲ್ ಜೇಮಿಸನ್, ಕ್ರಿಸ್ಟಿಯನ್ ಕ್ಲಾರ್ಕ್
ಭಾರತ ಆಡುವ 11ರ ಬಳಗ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.