ADVERTISEMENT

IND vs NZ: ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜನವರಿ 2026, 7:40 IST
Last Updated 18 ಜನವರಿ 2026, 7:40 IST
   

ಇಂದೋರ್: ಭಾರತ ಮತ್ತು ನ್ಯೂಜಿಲೆಂಡ್‌ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಂ ಇಂಡಿಯಾ ನಾಯಕ ಶುಭಮನ್‌ ಗಿಲ್‌ ಅವರು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಇಂದೋರ್‌ನ ಹೋಳ್ಕರ್‌ ಕ್ರೀಡಾಂಗಣದಲ್ಲಿ ಪಂದ್ಯ ಜರುಗುತ್ತಿದೆ.

ಭಾರತ ತಂಡವು ಈ ಪಂದ್ಯಕ್ಕಾಗಿ 1 ಬದಲಾವಣೆ ಮಾಡಿದೆ. ಕನ್ನಡಿಗ ಪ್ರಸಿದ್ಧ ಕೃಷ್ಣ ಬದಲಿಗೆ ವೇಗಿ ಅರ್ಷದೀಪ್‌ ಸಿಂಗ್‌ಗೆ ಅವಕಾಶ ನೀಡಲಾಗಿದೆ.

ADVERTISEMENT

ನ್ಯೂಜಿಲೆಂಡ್‌ ತಂಡವು ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಕಣಕ್ಕಿಳಿಸಿದೆ.

ವಡೋದರದಲ್ಲಿ ನಡೆದ ಮೊದಲ ಪಂದ್ಯದಲ್ಲಿ 4 ವಿಕೆಟ್‌ಗಳ ಜಯ ಸಾಧಿಸಿದ್ದ ಭಾರತ ತಂಡವು, ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ 7 ವಿಕೆಟ್‌ಗಳ ಸೋಲು ಅನುಭವಿಸಿತ್ತು.

ಎರಡೂ ತಂಡಗಳು ಕೂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಜಯಿಸುವ ತವಕದಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.