'ಎಕ್ಸ್' ಚಿತ್ರ
ದುಬೈ: 2025ರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಭಾನುವಾರ) ದುಬೈಯಲ್ಲಿ ನಡೆಯುವ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಈ ನಡುವೆ ಭಾರತ–ಪಾಕಿಸ್ತಾನ ಪಂದ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರಿ ವಿರೋಧ ವ್ಯಕ್ತವಾಗುತ್ತಿವೆ.
ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ. ಒಂದು ವೇಳೆ ಪಂದ್ಯ ಆಯೋಜನೆಯಾದರೆ ಯಾರೂ ಕೂಡಾ ವೀಕ್ಷಿಸಬಾರದು ಎಂದು ಮನವಿ ಮಾಡಲಾಗಿದೆ.
ಪಹಲ್ಗಾಮ್ ದಾಳಿಯ ಸಂತ್ರಸ್ತರಿಗಾಗಿ ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವಂತೆಯೂ ಕರೆ ನೀಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಬಳಿಕ ಎರಡು ದೇಶಗಳ ನಡುವಣ ಬಾಂಧವ್ಯವು ಮತ್ತಷ್ಟು ಹದಗೆಟ್ಟಿದೆ. ಪಾಕ್ ಜೊತೆಗಿ ದ್ವಿಪಕ್ಷೀಯ ಬಾಂಧವ್ಯವನ್ನು ಭಾರತ ಕಡಿದುಕೊಂಡಿತ್ತು.
ಉಗ್ರರ ದಾಳಿಗೆ ಪ್ರತೀಕಾರವಾಗಿ 'ಆಪರೇಷನ್ ಸಿಂಧೂರ' ಹೆಸರಿನ ಕಾರ್ಯಾಚರಣೆ ನಡೆಸಿದ ಭಾರತ, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಇದರ ಬೆನ್ನಲ್ಲೇ ಸಂಘರ್ಷ ತೀವ್ರಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.