ನಾಗ್ಪುರ: ಭಾರತ ಹಾಗೂ ಪಾಕಿಸ್ತಾನದ ನಡುವಣ ಪಂದ್ಯವು ರಾಷ್ಟ್ರೀಯ ಹಿತಾಸಕ್ತಿ ಹಾಗೂ ರಾಷ್ಟ್ರಧರ್ಮದ ವಿರುದ್ಧವಾಗಿದೆ ಎಂದು ಯೋಗಗುರು ಬಾಬಾ ರಾಮದೇವ್ ಹೇಳಿದ್ದಾರೆ.
ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಕಾಲದಲ್ಲಿ ಕ್ರಿಕೆಟ್ ಆಟ ಹಾಗೂ ಭಯೋತ್ಪಾದನೆನಡೆಯಬಾರದು ಎಂದು ಹೇಳಿದ್ದಾರೆ.
'ಇಂತಹ ಪರಿಸ್ಥಿತಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಕ್ರಿಕೆಟ್ ಆಡುವುದು ರಾಷ್ಟ್ರೀಯ ಹಿತಾಸಕ್ತಿ ಹಾಗೂ ರಾಷ್ಟ್ರಧರ್ಮದ ವಿರುದ್ಧವಾಗಿದೆ ಎಂದು ನಾನು ಭಾವಿಸುತ್ತೇನೆ. ಕ್ರಿಕೆಟ್ ಹಾಗೂ ಭಯೋತ್ಪಾದನೆಯನ್ನು ಏಕಕಾಲಕ್ಕೆ ಆಡಲಾಗುವುದಿಲ್ಲ' ಎಂದು ಹೇಳಿದರು.
ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ದುಬೈಯಲ್ಲಿ ಇಂದು ಸಂಜೆ 7.30ಕ್ಕೆ ಆರಂಭವಾಗಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ದಾಳಿಯ ಹಿನ್ನೆಲೆಯಲ್ಲಿ ಪಂದ್ಯವನ್ನು ಬಹಿಷ್ಕರಿಸುವಂತೆ ಬೇಡಿಕೆ ಕೇಳಿಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.