ADVERTISEMENT

PHOTOS | U19 WC: ಕರ್ನಾಟಕದ ನಿಕಿ ಪ್ರಸಾದ್ ನಾಯಕತ್ವದ ಭಾರತ ವಿಶ್ವ ಚಾಂಪಿಯನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಫೆಬ್ರುವರಿ 2025, 9:34 IST
Last Updated 2 ಫೆಬ್ರುವರಿ 2025, 9:34 IST
<div class="paragraphs"><p>ಐಸಿಸಿ 19 ವರ್ಷದೊಳಗಿನ ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ.</p></div>

ಐಸಿಸಿ 19 ವರ್ಷದೊಳಗಿನ ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ.

   

(ಚಿತ್ರ ಕೃಪೆ: X/@ICC)

ಹಾಲಿ ಚಾಂಪಿಯನ್ ಭಾರತ ತಂಡವು ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

ADVERTISEMENT

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ, 20 ಓವರ್‌ಗಳಲ್ಲಿ 82 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಭಾರತದ ಪರ ತೃಷಾ ಗೊಂಗಡಿ ಮೂರು ಮತ್ತು ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಮತ್ತು ಪಾರುಣಿಕ ಸಿಸೋಡಿಯಾ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು.

83 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಭಾರತ 11.2 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಬ್ಯಾಟಿಂಗ್‌ನಲ್ಲೂ ಮಿಂಚಿದ ತೃಷಾ 33 ಎಸೆತಗಳಲ್ಲಿ 44 ರನ್ (8 ಬೌಂಡರಿ) ಗಳಿಸಿ ಔಟಾಗದೆ ಉಳಿದರು.

ತೃಷಾ ಗೊಂಗಡಿ ಸರಣಿಶ್ರೇಷ್ಠ ಹಾಗೂ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದಾರೆ. 

ಒಂದೂ ಪಂದ್ಯದಲ್ಲೂ ಸೋಲು ಕಾಣದೇ ಭಾರತ ಕಿರೀಟ ಜಯಿಸಿದೆ.

ಭಾರತೀಯ ಆಟಗಾರ್ತಿಯರ ಸಂಭ್ರಮ

ಭಾರತ ತಂಡವನ್ನು ಕರ್ನಾಟಕದ ಆಟಗಾರ್ತಿ ನಿಕಿ ಪ್ರಸಾದ್ ಮುನ್ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.