ADVERTISEMENT

ಆಗಸ್ಟ್‌ನಲ್ಲಿ ಭಾರತ–ದಕ್ಷಿಣ ಆಫ್ರಿಕಾ ಟ್ವೆಂಟಿ–20 ಸರಣಿ?

ಪಿಟಿಐ
Published 21 ಮೇ 2020, 19:45 IST
Last Updated 21 ಮೇ 2020, 19:45 IST
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕ್ರಿಕೆಟ್ ಸರಣಿ ಆಯೋಜಿಸುವ ನಿರ್ಧಾರದಿಂದ ಕ್ರಿಕೆಟ್ ಚಟುವಟಿಕೆ ಗರಿಗೆದರುವ ನಿರೀಕ್ಷೆ ಮೂಡಿದೆ –ಎಎಫ್‌ಪಿ ಚಿತ್ರ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕ್ರಿಕೆಟ್ ಸರಣಿ ಆಯೋಜಿಸುವ ನಿರ್ಧಾರದಿಂದ ಕ್ರಿಕೆಟ್ ಚಟುವಟಿಕೆ ಗರಿಗೆದರುವ ನಿರೀಕ್ಷೆ ಮೂಡಿದೆ –ಎಎಫ್‌ಪಿ ಚಿತ್ರ   

ನವದೆಹಲಿ: ಕೊರೊನಾ–19 ಕಾಟ ಹೆಚ್ಚುತ್ತಿರುವುದರ ನಡುವೆಯೇ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಆಗಸ್ಟ್‌ನಲ್ಲಿ ಟ್ವೆಂಟಿ–20 ಕ್ರಿಕೆಟ್ ಸರಣಿ ಆಯೋಜಿಸಲು ಒಪ್ಪಂದವಾಗಿದ್ದು ಸರ್ಕಾರಗಳ ಅನುಮತಿಗಾಗಿ ಕಾಯಲಾಗುತ್ತಿದೆ.

ಗುರುವಾರ ಆನ್‌ಲೈನ್ ಮೂಲಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಲಾಗಿದೆ. ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಒಪ್ಪಿಗೆ ಸೂಚಿಸಿರುವುದಕ್ಕೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಜಾಕ್ಸ್ ಫಾಲ್ ಹರ್ಷ ವ್ಯಕ್ತಪಡಿಸಿದ್ದಾರೆ.ಆಗಸ್ಟ್ ಅಂತ್ಯದಲ್ಲಿ ಸರಣಿ ನಡೆಸಲು ನಿರ್ಧರಿಸಲಾಗಿದ್ದು ಮುಂದೂಡುವ ಸ್ಥಿತಿ ನಿರ್ಮಾಣವಾದರೆ ಕೆಲವೇ ದಿನ ಮಾತ್ರ ಮುಂದಕ್ಕೆ ಹಾಕಲಾಗುವುದು ಎಂದು ಫಾಲ್ ತಿಳಿಸಿದ್ದಾರೆ.

ಬಿಸಿಸಿಐ ಪದಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿ ಸರಣಿ ನಡೆಯುವ ಎಲ್ಲ ಸಾಧ್ಯತೆಗಳೂ ಇದ್ದು ಮೊದಲು ಕಣಕ್ಕೆ ಇಳಿಯಲು ಸಿದ್ಧರಿರುವ ಆಟಗಾರರನ್ನು ಗುರುತಿಸಬೇಕಾಗಿದೆ ಎಂದರು. ಈ ಸರಣಿಯಲ್ಲಿ ಆಡಲು ಒಪ್ಪಿಗೆ ಸೂಚಿಸುವ ಮೂಲಕ ಬಿಸಿಸಿಐ ಅಕ್ಟೋಬರ್ –ನವೆಂಬರ್‌ನಲ್ಲಿ ಐಪಿಎಲ್ ಆಯೋಜಿಸುವ ಹುಮ್ಮಸ್ಸಿನಲ್ಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.