ADVERTISEMENT

ಭಾರತ ತಂಡ ನಾಳೆ ‘ಆರೆಂಜ್‌ ಬಾಯ್ಸ್‌’

​ಪ್ರಜಾವಾಣಿ ವಾರ್ತೆ
Published 28 ಜೂನ್ 2019, 19:45 IST
Last Updated 28 ಜೂನ್ 2019, 19:45 IST
ಹೊಸ ಜೆರ್ಸಿಯ ಮುಂಭಾಗ
ಹೊಸ ಜೆರ್ಸಿಯ ಮುಂಭಾಗ   

ಬೆಂಗಳೂರು: ಬರ್ಮಿಂಗಂನಲ್ಲಿ ಭಾನುವಾರ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ನೀಲಿ ಜೆರ್ಸಿ ಬದಲು ಆರೆಂಜ್ ಜೆರ್ಸಿ ತೊಟ್ಟು ಕಣಕ್ಕೆ ಇಳಿಯಲಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಆತಿಥೇಯ ತಂಡ ಹೊರತುಪಡಿಸಿ ಇತರ ಎಲ್ಲ ತಂಡಗಳು ತಮ್ಮ ನಿಗದಿತ ಜೆರ್ಸಿಗೆ ಬದಲಾಗಿ ಕನಿಷ್ಟ ಒಂದು ಪಂದ್ಯದಲ್ಲಾದರೂ ಬೇರೆ ಬಣ್ಣದ ಜೆರ್ಸಿ ತೊಡಬೇಕು ಎಂದು ಐಸಿಸಿ ಸೂಚಿಸಿತ್ತು. ಭಾರತ ತಂಡ ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಇದನ್ನು ಜಾರಿಗೊಳಿಸಲು ನಿರ್ಣಯಿಸಿತ್ತು. ನೈಕಿ ಕಂಪನಿ ವಿನ್ಯಾಸಗೊಳಿಸಿದ ಉಡುಪನ್ನು ಶುಕ್ರವಾರ ಅನವಾರಣ ಮಾಡಿರುವುದಾಗಿ ಪ್ರಕಟಣೆ ತಿಳಿಸಿದೆ.

ಹೊಸ ತಲೆಮಾರಿನ ಯುವಜನರ ಉತ್ಸಾಹದ ಪ್ರತೀಕವಾಗಿರುವ ಈ ಜೆರ್ಸಿ ತಂಡದ ಆಟಗಾರರಲ್ಲಿ ಧೈರ್ಯ ಮತ್ತು ಸಾಹಸ ಮನೋಭಾವ ತುಂಬಲಿದೆ ಎಂಬ ವಿಶ್ವಾಸವಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ADVERTISEMENT

ಜೆರ್ಸಿಯನ್ನು ವೈಜ್ಞಾನಿಕವಾಗಿ ವಿನ್ಯಾಸಗೊಳಿಸಲಾಗಿದ್ದು ಇದನ್ನು ಧರಿಸಿ ಆಡುವುದು ಹೆಚ್ಚು ಆರಾಮದಾಯಕವಾಗಿರುತ್ತದೆ. ಹೀಗಾಗಿ ಅಂಗಣದಲ್ಲಿ ಹೆಚ್ಚು ಉಲ್ಲಾಸದಿಂದ ಇರಲು ಸಾಧ್ಯ ಎಂದು ಹೇಳಲಾಗಿದ್ದು ನೈಕಿ ಉತ್ಪನ್ನಗಳ ಅಧಿಕೃತ ಮಾರಾಟಗಾರರಾದ ಮೈಂತ್ರಾ ಮತ್ತು ಜಬಾಂಗ್‌ ಮಳಿಗೆಗಳಲ್ಲಿ ಇವುಗಳ ಮಾದರಿಗಳು ಖರೀದಿಗೆ ಲಭ್ಯವಿವೆ ಎಂದು ತಿಳಿಸಲಾಗಿದೆ.

ಭಾರತ ತಂಡದ ಹೊಸ ಜೆರ್ಸಿಯ ಬಣ್ಣ ರಾಜಕೀಯ ಚರ್ಚೆಗೂ ಗ್ರಾಸವಾಗಿತ್ತು. ಜೆರ್ಸಿ ಕೇಸರಿ ಬಣ್ಣದಲ್ಲಿರುತ್ತದೆ ಎಂದು ಹೇಳಿದ್ದ ಕೆಲವರು ಇದು ರಾಜಕೀಯ ಪಕ್ಷವೊಂದರ ಬಣ್ಣ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.