ಪ್ರಸಿದ್ಧ ಕೃಷ್ಣ
ಮುಂಬೈ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು ಇದರಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ.
ಶನಿವಾರ ಮುಂಬೈನಲ್ಲಿ ಜರುಗಿದ ಆಯ್ಕೆ ಮಂಡಳಿ ಸಭೆಯಲ್ಲಿ 18 ಆಟಗಾರರ ತಂಡವನ್ನು ಪ್ರಕಟಿಸಲಾಯಿತು. ನಾಯಕರಾಗಿ ಶುಭಮನ್ ಗಿಲ್, ಉಪನಾಯಕರಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.
ಕನ್ನಡಿಗರಾದ ಕೆ.ಎಲ್. ರಾಹುಲ್, ಕರುಣ್ ನಾಯರ್, ಪ್ರಸಿದ್ಧ್ ಕೃಷ್ಣ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಜೂನ್ 20ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.
ಭಾರತ ತಂಡ: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್/ ಉಪ ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ದೃವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಬೂಮ್ರಾ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.