ADVERTISEMENT

ಅಂಧ ಮಹಿಳಾ ಟಿ 20 ವಿಶ್ವಕಪ್‌: ಫೈನಲ್‌ಗೆ ಭಾರತ ತಂಡ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 13:54 IST
Last Updated 22 ನವೆಂಬರ್ 2025, 13:54 IST
<div class="paragraphs"><p>ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡದ  ವರ್ಷಾ ಉಮಾಪತಿ</p></div>

ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡದ ವರ್ಷಾ ಉಮಾಪತಿ

   

ಕೊಲಂಬೊ: ಭಾರತ ತಂಡ, ಅಂಧ ಮಹಿಳಾ ಚೊಚ್ಚಲ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಶನಿವಾರ 9 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತು.

ಭಾನುವಾರ ಪಿ.ಸರವಣಮುತ್ತು ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ನೇಪಾಳ ಇನ್ನೊಂದು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತು.‌

ADVERTISEMENT

ಆಸ್ಟ್ರೇಲಿಯಾ 20 ಓವರುಗಳಲ್ಲಿ 9 ವಿಕೆಟ್‌ಗೆ 109 ರನ್ ಗಳಿಸಿತು. ಆಸ್ಟ್ರೇಲಿಯಾ ತಂಡದ ಆರು ಮಂದಿ ರನೌಟ್‌ ಆದರು. ಭಾರತ ತಂಡದ ಪರ ಬಸಂತಿ 45 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿದರು. ಕೆ.ಕರುಣಾ 16 ರನ್ ಗಳಿಸಿದ್ದು, ಭಾರತ 11.5 ಓವರುಗಳಲ್ಲಿ 1 ವಿಕೆಟ್‌ಗೆ 112 ರನ್ ಬಾರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.