ADVERTISEMENT

ಕ್ರಿಕೆಟ್‌: ಭಾರತದ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾಕ್ಕೆ ಆರಂಭಿಕ ಆಘಾತ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 9:04 IST
Last Updated 2 ಮಾರ್ಚ್ 2019, 9:04 IST
ಚಿತ್ರ: ಬಿಸಿಸಿಐ ಟ್ವಿಟರ್‌
ಚಿತ್ರ: ಬಿಸಿಸಿಐ ಟ್ವಿಟರ್‌   

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿದೆ.

ಭಾರತದ ವಿರುದ್ಧ ಟಾಸ್‌ ಗೆದ್ದ ಆಸೀಸ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಸದ್ಯ ಬ್ಯಾಟಿಂಗ್‌ ಮುಂದುವರಿಸಿರುವ ಆಸ್ಟ್ರೇಲಿಯಾ 13 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 59 ರನ್‌ ಗಳಿಸಿದೆ.

ಮೇ ಕೊನೆಯಲ್ಲಿ ಆರಂಭವಾಗಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಸಜ್ಜಾಗುತ್ತಿರುವ ಉಭಯ ತಂಡಗಳಿಗೆ ಇದು ಕೊನೆಯ ತಾಲೀಮು ಎಂದು ಹೇಳಲಾಗಿದೆ.

ADVERTISEMENT

ಟ್ವೆಂಟಿ–20 ಸರಣಿಯಲ್ಲಿ ಸೋತಿರುವ ಭಾರತ ತಿರುಗೇಟು ನೀಡಲು ಸಜ್ಜಾಗಿದೆ. ತವರಿನಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಭಾರತಕ್ಕೆ ಮಣಿದಿದ್ದ ಆಸ್ಟ್ರೇಲಿಯಾ ಸೇಡು ತೀರಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.

ಭಾರತ ತಂಡದ ಕೋಚ್ ಮತ್ತು ನಾಯಕ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಪ್ರಯೋಗಗಳಿಗೆ ಮೊರೆ ಹೋಗುವ ಸಾಧ್ಯತೆ ಇದೆ. ಈ ಮೂಲಕ ವಿಶ್ವಕಪ್‌ಗೆ ಬಲಿಷ್ಠ ತಂಡವನ್ನು ಕಟ್ಟುವತ್ತ ಚಿತ್ತ ನೆಡಲಿದ್ದಾರೆ. ಹೀಗಾಗಿ ಕೆ.ಎಲ್‌.ರಾಹುಲ್‌, ರಿಷಭ್ ಪಂತ್, ವಿಜಯಶಂಕರ್‌ ಮತ್ತು ಸಿದ್ಧಾರ್ಥ್ ಕೌಲ್‌ ಅವರಿಗೆ ಸರಣಿ ಸವಾಲಿನದ್ದಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.