ADVERTISEMENT

INDvAUS 1st T20I | ಆಸ್ಟ್ರೇಲಿಯಾ ತಂಡಕ್ಕೆ ಭರ್ಜರಿ ಜಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2022, 18:18 IST
Last Updated 20 ಸೆಪ್ಟೆಂಬರ್ 2022, 18:18 IST
ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್ ವೈಖರಿ –ಎಎಫ್‌ಪಿ ಚಿತ್ರ
ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್ ವೈಖರಿ –ಎಎಫ್‌ಪಿ ಚಿತ್ರ   

ಮೊಹಾಲಿ: ಟೀಮ್‌ ಇಂಡಿಯಾದ ಬೃಹತ್‌ ಮೊತ್ತವನ್ನು ಬೆನ್ನಟ್ಟಿದಆಸ್ಟ್ರೇಲಿಯಾ ತಂಡವು 19.2 ಓವರ್‌ಗಳಲ್ಲಿ 211 ರನ್‌ ಗಳಿಸಿತು. ಈ ಮೂಲಕ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿತ್ತು.

ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ ಆರು ವಿಕೆಟ್‌ ನಷ್ಟಕ್ಕೆ 208 ರನ್ ಗಳಿಸಿತ್ತು.

ADVERTISEMENT

ಇನ್ನಿಂಗ್ಸ್‌ ಆರಂಭಿಸಿದ ಟೀಮ್ ಇಂಡಿಯಾ ಪ್ರಮುಖ ಎರಡು ವಿಕೆಟ್‌ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತು. ರೋಹಿತ್‌ ಶರ್ಮಾ 11 , ವಿರಾಟ್‌ ಕೊಹ್ಲಿ 2 ರನ್ ಗಳಿಸಿ ಔಟ್ ಆದರು. ಬಳಿಕ ಕೆ.ಎಲ್‌. ರಾಹುಲ್‌ 55, ಸೂರ್ಯಕುಮಾರ್ ಯಾದವ್‌ 46, ಹಾರ್ದಿಕ್‌ ಪಾಂಡ್ಯ ಔಟಾಗದೆ 71 ರನ್‌ ಗಳಿಸಿ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿತಂಡಕ್ಕೆ ಆಸರೆಯಾದರು.

ರಿಷಭ್ ಪಂತ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ದಿನೇಶ್ ಕಾರ್ತಿಕ್‌ ಕೇವಲ 6 ರನ್ ಗಳಿಸಲಷ್ಟೇ ಶಕ್ತರಾದರು. ಇತ್ತ ‌ಹರ್ಷಲ್‌ ಪಟೇಲ್‌ ಕೂಡ 6 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಆಸ್ಟ್ರೇಲಿಯಾ ಪರ ನೇಥನ್ ಎಲಿಸ್ 3, ಜೋಶ್‌ ಹ್ಯಾಜೆಲ್‌ವುಡ್ 2, ಕೆಮರಾನ್‌ ಗ್ರೀನ್ 1 ವಿಕೆಟ್‌ ಪಡೆದರು.

ಸದ್ಯ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾ 3ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 38ರನ್ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.